ಕುಂದಾಪುರದ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ರಕ್ತದಾನ ಶಿಬಿರವನ್ನು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ಘಟಕದ ಸಭಾಪತಿ ಜಯಕಾರ ಶೆಟ್ಟಿ ಉದ್ಘಾಟಿಸಿದರು 
ಜಿಲ್ಲೆ

ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಇಂದಿರಾ ಎನ್ ಕೆ

ಗಂಗೊಳ್ಳಿ: ಕುಂದಾಪುರದ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ರೆಡ್‌ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ, ಎನ್‌ಸಿಸಿ ಮತ್ತು ರೇಂಜರ್ಸ್ ಮತ್ತು ರೋವರ್ಸ್, ಕುಂದಾಪುರದ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ರಕ್ತದಾನ ಶಿಬಿರ ಶನಿವಾರ ನಡೆಯಿತು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ಘಟಕದ ಸಭಾಪತಿ ಜಯಕಾರ ಶೆಟ್ಟಿ ಶಿಬಿರ ಉದ್ಘಾಟಿಸಿದರು. ಭಂಡಾರ್ಕಾರ್ಸ್ ಪದವಿ ಕಾಲೇಜು ಪ್ರಾಂಶುಪಾಲ ಡಾ.ಶುಭಕರಾಚಾರಿ ಅಧ್ಯಕ್ಷತೆ ವಹಿಸಿದ್ದರು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ಘಟಕ ಕಾರ್ಯದರ್ಶಿ ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಕಾಲೇಜಿನ ಎನ್‌ಸಿಸಿ ಅಧಿಕಾರಿ ಶರಣ್ ಎಸ್, ರೇಂಜರ್ಸ್ ಮತ್ತು ರೋವರ್ಸ್ ಸಂಯೋಜಕ ರಿತಿನ್ ಎಸ್. ಉಪಸ್ಥಿತರಿದ್ದರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತ್ಯನಾರಾಯಣ ಸ್ವಾಗತಿಸಿದರು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಘಟಕ ಕಾರ್ಯಕ್ರಮಾಧಿಕಾರಿ ವಿದ್ಯಾರಾಣಿ ವಂದಿಸಿದರು. ಎನ್‌ಸಿಸಿ ಕೆಡೆಟ್ ರಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.