ಜಿಲ್ಲೆ

ರಕ್ತದಾನದಿಂದ ಮತ್ತೊಂದು ಜೀವಕ್ಕೆ ಬೆಳಕು

ಇಂದಿರಾ ಎನ್ ಕೆ

ಶಿರ್ವ: ರಕ್ತದಾನ ಇನ್ನೊಂದು ಜೀವಕ್ಕೆ ಬೆಳಕಾಗುತ್ತದೆ. ಜತೆಗೆ ದೇಹದಲ್ಲಿ ಹೊಸ ರಕ್ತಕಣಗಳೂ ತುಂಬುತ್ತವೆ. ಜಗತ್ತಿನಲ್ಲೇ ಶ್ರೇಷ್ಠ ದಾನವೆಂದರೆ ರಕ್ತದಾನ ಎಂದು ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ರಾಧಾಕೃಷ್ಣ ಎಸ್.ಐತಾಳ್ ಹೇಳಿದರು.

ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್‌ಕ್ರಾಸ್ ಘಟಕ, ರೋಟರ‌್ಯಾಕ್ಟ್ ಕ್ಲಬ್, ರಕ್ತನಿಧಿ ಕೇಂದ್ರ, ಕಸ್ತೂರ್ಬಾ ಆಸ್ಪತ್ರೆ ಸಹಯೋಗದಲ್ಲಿ ಕಾಲೇಜಿನ ಆವರಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ಮಾತನಾಡಿದರು. ಕೆಎಂಸಿ ಆಸ್ಪತ್ರೆಯ ರಕ್ತ ವರ್ಗಾವಣೆ ವಿಭಾಗದ ಮುಖ್ಯಸ್ಥ ಡಾ.ಗಣೇಶ್ ಮೋಹನ್, ಉಪನ್ಯಾಸಕರು ಹಾಗೂ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.