ಜಿಲ್ಲೆ

ದೇಶಾದ್ಯಂತ ಸಮಾಜಮುಖಿ ಚಟುವಟಿಕೆ ಆಯೋಜನೆ : ಸತೀಶ್ ಕುಂಪಲ ಹೇಳಿಕೆ

ಸೌಮ್ಯ ಆರ್

ಗುರುಪುರ: ಮೋದಿ ಅವರ ಜನ್ಮದಿನದ ಪ್ರಯುಕ್ತ ಸೆ.17ರಿಂದ ಅಕ್ಟೋಬರ್ 2ರವರೆಗೆ ಜಿಲ್ಲೆ, ರಾಜ್ಯ, ದೇಶಾದ್ಯಂತ ಸಮಾಜಮುಖಿ ಚಟುವಟಿಕೆಗಳು ನಡೆಯಲಿವೆ. ಮಂಗಳೂರು ಉತ್ತರ ಮಂಡಲ ಯುವ ಮೋರ್ಚಾ ಪ್ರಥಮ ಬಾರಿ ರಕ್ತದಾನ ಶಿಬಿರ ಹಮ್ಮಿಕೊಂಡಿದೆ. ಜಿಲ್ಲೆಯಲ್ಲಿ ವೈದ್ಯಕೀಯ ಶಿಬಿರ, ಪರಿಸರ ಸ್ವಚ್ಛತೆ, ಸಸಿ ನೆಟ್ಟು ಪೋಷಣೆ ಸಹಿತ ಹಲವು ಕಾರ್ಯಕ್ರಮ ರೂಪಿಸಲಾಗಿದೆ ಎಂದು ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು.

ಕಾವೂರಿನ ಸೊಸೈಟಿ ಸಭಾಂಗಣದಲ್ಲಿ ಬಿಜೆಪಿ ಮಂಗಳೂರು ಉತ್ತರ ಮಂಡಲ ಯುವ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಬುಧವಾರ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಶಾಸಕ ಡಾ.ಭರತ್ ಶೆಟ್ಟಿ ಮಾತನಾಡಿ, ಆರೆಸ್ಸೆಸ್ಸ್‌ನಲ್ಲಿ ಪ್ರಚಾರಕರಾಗಿ ನಿಸ್ವಾರ್ಥ ಸೇವೆಗೈಯುವ ಮೂಲಕ ಗುಜರಾತಿನಲ್ಲಿ ಬಿಜೆಪಿ ಪತಾಕೆ ಹಾರಿಸಿ, ಪಕ್ಷ ಸಂಘಟನೆಗೆ ಆದ್ಯತೆ ನೀಡುತ್ತಲೇ ಬಂದಿರುವ ಮೋದಿಯವರು ಮೊದಲಿಗೆ ಗುಜರಾತಿನ ಮುಖ್ಯಮಂತ್ರಿಯಾದರು. ನಂತರ ಪ್ರಧಾನಮಂತ್ರಿಯಾಗಿ ಸುದೀರ್ಘ ಆಡಳಿತ ನಡೆಸುವ ಮೂಲಕ ಪ್ರಪಂಚದಲ್ಲಿ ಗುರುತಿಸಿಕೊಂಡಿದ್ದಾರೆ ಎಂದರು.

ಮಂಡಲ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ತಿಲಕ್‌ರಾಜ್ ಕೃಷ್ಣಾಪುರ, ಪೂಜಾ ಪೈ, ಬಿಜೆಪಿ ಮುಖಂಡ ರಣದೀಪ್ ಕಾಂಚನ್, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಪ್ರಧಾನ ಕಾರ್ಯದರ್ಶಿ ಭರತ್‌ರಾಜ್ ಕೃಷ್ಣಾಪುರ, ಪ್ರಮುಖರಾದ ಶ್ವೇತಾ ಪೂಜಾರಿ, ಆರ್ಷಿತ್ ನೋಂಡಾ, ಸಂದೀಪ್ ಪಚ್ಚನಾಡಿ, ಲೋಹಿತ್ ಅಮೀನ್, ಎಜೆ ಶೆಟ್ಟಿ ಆಸ್ಪತ್ರೆ ಬ್ಲಡ್ ಬ್ಯಾಂಕ್ ಪ್ರಮುಖ ಗೋಪಾಲಕೃಷ್ಣ, ಮನಪಾ ಮಾಜಿ ಸದಸ್ಯರು, ಯುವ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು. ಉತ್ತರ ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಕ್ಷಿತ್ ಪೂಜಾರಿ ಸ್ವಾಗತಿಸಿದರು. ಯಶ್ಪಾಲ್ ಸಾಲ್ಯಾನ್ ನಿರೂಪಿಸಿದರು. ಸಂಜೀವ ಶೆಟ್ಟಿ ವಂದಿಸಿದರು.