ಜಿಲ್ಲೆ

ಇಂದು ಸ್ವಯಂಪ್ರೇರಿತ ರಕ್ತದಾನ ಶಿಬಿರ

ನಾಗೇಶ ಎಸ್

ಶನಿವಾರಸಂತೆ: ಸಮೀಪದ ಆಲೂರು ಸಿದ್ದಾಪುರ ಅರೆಭಾಷೆ ಗೌಡ ಸಮಾಜ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಆರೋಗ್ಯ ಕೇಂದ್ರದಲ್ಲಿ ಅ.15ರಂದು ಬೆಳಗ್ಗೆ 10.30 ಗಂಟೆಯಿಂದ 7ನೇ ವರ್ಷದ ಸಾರ್ವಜನಿಕ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡುವ ಮೂಲಕ ಯಶಸ್ವಿಗೊಳಿಸುವಂತೆ ಅರೆಭಾಷೆ ಗೌಡ ಸಮಾಜದ ಕಾರ್ಯದರ್ಶಿ ಕುಯುಮುಡಿ ಜಯಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.