ಧಾರವಾಡ: ಅಯೋಧ್ಯೆಯ ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ನಗರದ ಸುವರ್ಣ ಎಜುಕೇಶನ್ ಟ್ರಸ್ಟ್ನ ಸುವರ್ಣ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹುಬ್ಬಳ್ಳಿಯ ರಾಷ್ಟೊçÃತ್ಥಾನ ರಕ್ತ ಕೇಂದ್ರ ಸಹಯೋಗದಲ್ಲಿ ಗುರುವಾರ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಎಬಿವಿಪಿ ರಾಜ್ಯ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಪ್ರತೀಕ ಮಾಳಿ ಶಿಬಿರಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯ ಸವಿನೆನಪಿನ್ಲಿ ವಿನೂತನ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ. ಕೋಟಿ ಕೋಟಿ ಭಾರತಿಯರ ಕನಸಾಗಿದ್ದ ರಾಮ ಮಂದಿರ ನಿರ್ಮಾಣ ಈಗ ನನಸಾಗುತ್ತಿದೆ. ಇದು ಪ್ರತಿಯೊಬ್ಬ ಭಾರತೀಯನ ಹೆಮ್ಮೆ ಎಂದರು.
ಸAಸ್ಥೆಯ ಕಾರ್ಯದರ್ಶಿ ಸವಿತಾ ಅಮರಶೆಟ್ಟಿ ಮಾತನಾಡಿ, ಶ್ರೀರಾಮನ ನಡೆ- ನುಡಿ, ಆಚಾರ- ವಿಚಾರ ಹಾಗೂ ತತ್ವಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು ಆದರ್ಶ ವ್ಯಕ್ತಿಗಳಾಗಬೇಕು ಎಂದರು.
ವಿಶ್ವನಾಥ ಅಮರಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಎನ್.ಎಸ್. ಸಾಲಿಮಠ ನಿರೂಪಿಸಿದರು. ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.