blood camp 
ಜಿಲ್ಲೆ

ಜೀವದ್ಯುತಿ ರಕ್ತದಾನ ಶಿಬಿರ

ಬದಿಯಡ್ಕ: ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಹೈಯರ್ ಸೆಕೆಂಡರಿ ಶಾಲೆಯ ಎನ್.ಎಸ್.ಎಸ್ ಘಟಕದ ಆಶ್ರಯದಲ್ಲಿ ಕೆ.ಎಸ್.ಬಿ.ಟಿ. ಸಿ ಕಾಸರಗೋಡು ಸಹಕಾರದೊಂದಿಗೆ ಶಾಲೆಯಲ್ಲಿ ಜೀವದ್ಯುತಿ ರಕ್ತದಾನ ಶಿಬಿರ ಮಂಗಳವಾರ ನಡೆಯಿತು.

ಕುಂಬ್ಡಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಮೀದ್ ಪೊಸಳಿಗೆ ಉದ್ಘಾಟಿಸಿದರು. ಪ್ರಾಂಶುಪಾಲ ಸತೀಶ ವೈ. ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಗೋಸಾಡ, ಶಾಲಾ ಪಿಟಿಎ ಅಧ್ಯಕ್ಷ ರಾಜಾರಾಮ ಭಟ್ ಮಿತ್ತೂರು ಶುಭ ಹಾರೈಸಿದರು. ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ವಿನೋದ್ ಕುಮಾರ್ ಸ್ವಾಗತಿಸಿದರು. ಎನ್.ಎಸ್.ಎಸ್ ಲೀಡರ್ ಶ್ರೀನಿಧಿ ಎಸ್. ವಂದಿಸಿದರು. ವಿದ್ಯಾರ್ಥಿ ಶ್ರೀನಿಧಿ ಎಸ್. ಕಾರ್ಯಕ್ರಮ ನಿರೂಪಿಸಿದರು.