ಜಿಲ್ಲೆ

ಉಜಿರೆಯಲ್ಲಿ ರಕ್ತದಾನ ಶಿಬಿರ

ಸೌಮ್ಯ ಆರ್

ಬೆಳ್ತಂಗಡಿ: ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ನೆಸ್ಸೆಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಮತ್ತು ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರು ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ ನಡೆಯಿತು. ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಸಂತೋಷ ಅಧ್ಯಕ್ಷತೆ ವಹಿಸಿದ್ದರು. ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾರ್ಯನಿರ್ವಹಣಾಧಿಕಾರಿ ಉಜಿರೆ ಜನಾರ್ದನ, ಬ್ಲಡ್ ಬ್ಯಾಂಕ್ ಮಂಗಳೂರು ರಕ್ತನಿಧಿ ಸಂಚಾಲಕ ಪ್ರವೀಣ್, ರಕ್ತ ಪ್ರಯೋಗಾಲಯದ ಅಧಿಕಾರಿ ಕ್ಷಿತಿಕಂಠ ಭಟ್, ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಲಿಸ್ಟ್ ಆಸ್ಪತ್ರೆ ಮತ್ತು ಯುವ ರೆಡ್ ಕ್ರಾಸ್ ಘಟಕ ಯೋಜನಾಧಿಕಾರಿ ಅವನೀಶ್ ಪಿ., ಎನ್ನೆಸ್ಸೆಸ್ ಘಟಕ ಯೋಜನಾಧಿಕಾರಿ ಪ್ರಕಾಶ್ ಮತ್ತು ಉಪಯೋಜನಾಧಿಕಾರಿ ಲೋಹಿತ್, ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಶಿಬಿರದಲ್ಲಿ 102 ಯೂನಿಟ್ ರಕ್ತ ಸಂಗ್ರಹಿಸಲಾಯಿತು.