ಜಿಲ್ಲೆ

ರಕ್ತದಾನದ ಬಗ್ಗೆ ಭಯ ಅನಗತ್ಯ

ಗೋಪಾಲಕೃಷ್ಣ ಪಾದೂರ್

ಉಡುಪಿ: ಇನ್ನೊಬ್ಬರ ಜೀವ ಉಳಿಸಲು ನೆರವಾಗುವ ರಕ್ತದಾನದ ಬಗ್ಗೆ ಭಯ ಅನಗತ್ಯ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಬದುಕಿದ್ದಾಗ ರಕ್ತದಾನ ಮತ್ತು ಬದುಕಿನ ನಂತರ ನೇತ್ರದಾನ, ಅಂಗಾಂಗ ದಾನ ಮಾಡುವ ಮೂಲಕ ಇನ್ನೊಬ್ಬರಿಗೆ ಜೀವನ ನೀಡಬಹುದು ಎಂದು ಮಾಜಿ ಸಂಸದ ಕೆ. ಜಯಪ್ರಕಾಶ್​ ಹೆಗ್ಡೆ ಹೇಳಿದರು.

ಉಡುಪಿ ಬ್ಲಾಕ್​ ಕಾಂಗ್ರೆಸ್​ ಸಮಿತಿ ಹಾಗೂ ಜಿಲ್ಲಾಸ್ಪತ್ರೆ ಸಹಯೋಗದಲ್ಲಿ ಬ್ರಹ್ಮಗಿರಿಯ ಕಾಂಗ್ರೆಸ್​ ಭವನದಲ್ಲಿ ನಡೆದ ಸ್ವಯಂಪ್ರೇರಿತ ಬೃಹತ್​ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾಧ್ಯಕ್ಷ ಅಶೋಕ್​ ಕುಮಾರ್​ ಕೊಡವೂರು, ಮಾಜಿ ಸಚಿವ ವಿನಯ್​ ಕುಮಾರ್​ ಸೊರಕೆ, ವಿಪ ಸದಸ್ಯ ಮಂಜುನಾಥ್​ ಭಂಡಾರಿ, ಮುಖಂಡರಾದ ಗೋಪಾಲ್​ ಪೂಜಾರಿ, ಮುನಿಯಾಲು ಉದಯ್​ ಶೆಟ್ಟಿ, ದಿನೇಶ್​ ಹೆಗ್ಡೆ ಮೊಳಹಳ್ಳಿ, ಪ್ರಸಾದ್​ ರಾಜ್​ ಕಾಂಚನ್​, ರಮೇಶ್​ ಕಾಂಚನ್​, ವೆರೋನಿಕಾ ಕರ್ನೇಲಿಯೋ, ಜ್ಯೋತಿ ಹೆಬ್ಬಾರ್​ ಹಾಗೂ ಮಮತಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.