ಬಂಟ್ವಾಳ: ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಎನ್ನೆಸ್ಸೆಸ್ ಹಾಗೂ ರೆಡ್‌ಕ್ರಾಸ್ ಘಟಕ ವತಿಯಿಂದ ಮಂಗಳೂರಿನ ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ, ಪಾಂಚಜನ್ಯ ಹಿರಿಯ ವಿದ್ಯಾರ್ಥಿಗಳ ಸಂಘ, ಕಲ್ಲಡ್ಕ ರಿಕ್ಷಾ ಚಾಲಕ ಮಾಲೀಕರ ಸಂಘದ ಸಹಕಾರದಲ್ಲಿ ರಕ್ತದಾನ ಶಿಬಿರ ಕಲ್ಲಡ್ಕದಲ್ಲಿ ಜರುಗಿತು
ಮಂಗಳೂರು ಕೆಎಂಸಿ ಆಸ್ಪತ್ರೆ ತಾಂತ್ರಿಕ ತಜ್ಞ ರಾವೇಂದ್ರ ಶಿಬಿರ ಉದ್ಘಾಟಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸಿದ್ದರು. ಪಾಂಚಜನ್ಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ನರಿಂಗಾನ, ಶ್ರೀರಾಮ ಸೌಹಾರ್ದ ಸಹಕಾರಿ ಸಂಘ ಕಲ್ಲಡ್ಕದ ಅಧ್ಯಕ್ಷ ನಾರಾಯಣ ಶೆಟ್ಟಿ ಕುಲ್ಯಾರ್, ರಿಕ್ಷಾ ಚಾಲಕ ಮಾಲೀಕರ ಸಂಘದ ಸದಸ್ಯ ಜಯಂತ ಸುಧೆಕಾರ್, ಶ್ರೀರಾಮ ವಿದ್ಯಾಕೇಂದ್ರ ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರಕಟ್ಟೆ ಮೊದಲಾದವರಿದ್ದರು. ವಿದ್ಯಾರ್ಥಿ ಜಯಸೂರ್ಯ ಸ್ವಾಗತಿಸಿದರು. ವಿಭಾ ನಾಯಕ್ ನಿರೂಪಿಸಿದರು. ಯಜ್ಞೇಶ್ ವಂದಿಸಿದರು.