ಗೊಳಸಂಗಿ: ಸ್ಥಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಜಯಪುರ ಜಿಲ್ಲಾಸ್ಪತ್ರೆಯ ರಕ್ತನಿ-ಧಿ ಕೇಂದ್ರದ ಸಹಯೋಗದಲ್ಲಿ ಡಿ.13 ರಂದು ಬೆಳಗ್ಗೆ 11 ಗಂಟೆಗೆ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
18ರಿಂದ 40 ವಯಸ್ಸಿನ ಆರೋಗ್ಯವಂತರು ರಕ್ತದಾನ ಮಾಡಬಹುದು ಎಂದು ಗೊಳಸಂಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಎ.ಎ. ಮಕಾನದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂಖ್ಯೆ 9900258055 ಸಂಪರ್ಕಿಸಬಹುದಾಗಿದೆ.