ಲಕ್ಷ್ಮೇಶ್ವರ: ತಾಲೂಕಿನ ಸೂರಣಗಿ ಗ್ರಾಮದ ನವಚೇತನ ಯುವಕ ಮಂಡಳದ 20ನೇ ವರ್ಷದ ಗಣೇಶೋತ್ಸವ ಅಂಗವಾಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸೆ.14ರಂದು ಬೆಳಗ್ಗೆ 10ರಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಗದಗ ಜಿಲ್ಲಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸಹಯೋಗದಲ್ಲಿ ಶಿಬಿರ ಜರುಗಲಿದೆ. ಹೂವಿನಶಿಗ್ಲಿ ವಿರಕ್ತಮಠದ ಚನ್ನವೀರ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಕಾರ್ಯಕ್ರಮವನ್ನು ಶಾಸಕ ಡಾ. ಚಂದ್ರು ಲಮಾಣಿ ಉದ್ಘಾಟಿಸಲಿದ್ದಾರೆ. ಗ್ರಾಪಂ ಅಧ್ಯಕ್ಷೆ ಚನ್ನಮ್ಮ ಕಳ್ಳಿಹಾಳ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಶಾಸಕರಾದ ಜಿ.ಎಸ್. ಗಡ್ಡದೇವರಮಠ, ಜಿ.ಎಂ. ಮಹಾಂತಶೆಟ್ಟರ, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ ಆಗಮಿಸಲಿದ್ದಾರೆ.