ಮೈಸೂರು: ಡಾ.ಬಿ.ಆರ್.ಅಂಬೇಡ್ಕರ್ 68ನೇ ಪರಿನಿರ್ವಾಣದ ದಿನದ ನಿಮಿತ್ತ ರಕ್ತದಾನ ಶಿಬಿರ ಮತ್ತು ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.
ಕೆಪಿಟಿಸಿಎಲ್, ಸೆಸ್ಕ್ ಪರಿಶಿಷ್ಠ ಜಾತಿ ಮತ್ತು ಪಂಗಡ ಕಲ್ಯಾಣ ಸಂಸ್ಥೆ, ಸಹೋದರ ಸಂಘ ಸಂಸ್ಥೆಗಳು ಹಾಗೂ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಶ್ರೀಹರ್ಷರಸ್ತೆಯಲ್ಲಿರುವ ಸೆಸ್ಕ್ ಎಂಪಿಎಲ್ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಶಿಬಿರದಲ್ಲಿ 125 ದಾನಿಗಳು ರಕ್ತದಾನ ಮಾಡಿದರು.
ಅಪೋಲೋ ಆಸ್ಪತ್ರೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ ಮತ್ತು ಮಹಿಳೆಯರಿಗಾಗಿ ಕ್ಯಾನ್ಸರ್ ಕುರಿತಂತೆ ವಿಶೇಷ ಉಪನ್ಯಾಸ ಮತ್ತು ಆಪ್ತ ಸಮಾಲೋಚನೆ ಆಯೋಜಿಸಲಾಗಿತ್ತು.
ಸೆಸ್ಕ್ ಅಧ್ಯಕ್ಷ ರಮೇಶ್‌ಬಾಬು ಬಂಡಿಸಿದ್ದೇಗೌಡ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಜಿ.ಶೀಲಾ, ತಾಂತ್ರಿಕ ವಿಭಾಗದ ನಿರ್ದೇಶಕ ಮುನಿಗೋಪಾಲರಾಜು ಅವರು ಬಾಬಾ ಸಾಹೇಬರ ಭಾವಚಿತ್ರಕ್ಕೆ ದೀಪ ಬೆಳಗಿ ಪುಷ್ಪಾರ್ಚನೆ ಮಾಡಿದರು.
ಅಧೀಕ್ಷಕ ಇಂಜಿನಿಯರ್ ಸುನೀಲ್‌ಕುಮಾರ್, ಸೆಸ್ಕ್ ಮುಖ್ಯ ಇಂಜಿನಿಯರ್ ದಿವಾಕರ್, ಕಾರ್ಯ ನಿರ್ವಾಹಕ ಇಂಜಿನಿಯರ್ ಅನಿತಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕುಮಾರಸ್ವಾಮಿ, ವೈದ್ಯ ಡಾ. ನಯಾಜ್ ಪಾಷ ಇತರರು ಇದ್ದರು.