ಕೂಡ್ಲಿಗಿ ತಾಲೂಕಿನ ಚಂದ್ರಶೇಖರಪುರದಲ್ಲಿ ಹಿಂದು ಜಾಗರಣಾ ವೇದಿಕೆಯಿಂದ ಸರ್ಕಾರಿ ಸೇವೆ ಸಲ್ಲಿಸಿ ನಿವೃತ್ತಿಯಾದ ನಾಗೇಂದ್ರ ಆಚಾರಿ,ಜಿ.ಮಲ್ಲಪ್ಪ, ಲಿಂಗಪ್ಪ, ನಾಗರಾಜರನ್ನು ಸನ್ಮಾನಿಸಲಾಯಿತು. 
ಜಿಲ್ಲೆ

ರಕ್ತದಾನ ಮರುಜನ್ಮ ನೀಡುವ ಶ್ರೇಷ್ಠ್ಠ ಸೇವೆ ಎಂದ ಕೂಡ್ಲಿಗಿ ಹಿರೇಮಠ ಸಂಸ್ಥಾನದ ಪ್ರಶಾಂತಸಾಗರ ಸ್ವಾಮೀಜಿ

ಕೂಡ್ಲಿಗಿ: ರಕ್ತದಾನ ಮತ್ತೊಬ್ಬರ ಪ್ರಾಣ ಉಳಿಸುವ ಜತೆಗೆ ವ್ಯಕ್ತಿ ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದು ಕೂಡ್ಲಿಗಿ ಹಿರೇಮಠ ಸಂಸ್ಥಾನದ ಪ್ರಶಾಂತಸಾಗರ ಸ್ವಾಮೀಜಿ ತಿಳಿಸಿದರು.

ತಾಲೂಕಿನ ಚಂದ್ರಶೇಖರಪುರದಲ್ಲಿ ಎರಡನೇ ವಷರ್ದ ಹಿಂದು ಜಾಗರಣಾ ವೇದಿಕೆ ಗಣಪತಿ ಹಬ್ಬದ ಪ್ರಯುಕ್ತ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು. ರಕ್ತಕ್ಕೆ ಪರ್ಯಾಯ ಇಲ್ಲ, ಆದ್ದರಿಂದ ಸಾವಿನ ಅಂಚಿನಲ್ಲಿರುವವರ ಜೀವ ಉಳಿಸಬೇಕಾದರೆ ರಕ್ತವೇ ನೀಡಬೇಕು.ರಕ್ತದಾನ ಇತರರಿಗೆ ಮರುಜನ್ಮ ನೀಡುವ ಶ್ರೇಷ್ಠ್ಠ ಮತ್ತು ಸಾರ್ಥಕ ಸೇವೆಯಾಗಿದೆ ಎಂದು ಅಭಿಪ್ರಾಯಪಟ್ಟರು. ಇದೇ ಸಂಧರ್ಭದಲ್ಲಿ ನಿವೃತ್ತ ಸರ್ಕಾರಿ ನೌಕರರಾದ ನಾಗೇಂದ್ರ ಆಚಾರಿ, ಜಿ.ಮಲ್ಲಪ್ಪ, ಲಿಂಗಪ್ಪ, ನಾಗರಾಜ ಇವರುಗಳಿಗೆ ಸನ್ಮಾನ ಮಾಡಲಾಯಿತು.

ಹಿಂದೂ ಜಾಗರಣಾ ವೇದಿಕೆ ತಾಲೂಕು ಪ್ರಧಾನ ಕಾರ್ಯದರ್ಶಿ ಮಾರುತಿ, ಮಂಜುನಾಥ,ಲೋಕೇಶ, ಬಸವನಗೌಡ,ಮಂಜು,ತಿಪ್ಪೇಶ,ರುದ್ರೇಶ,ಬಸವೇಶ ಸೇರಿದಂತೆ ಸರ್ವ ಸದಸ್ಯರು ಹಾಜರಿದ್ದರು.