ಸುರತ್ಕಲ್ ದೊಡ್ಡಕೊಪ್ಲದಲ್ಲಿ ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ 
ಜಿಲ್ಲೆ

ಸಮುದ್ರದಲ್ಲಿ ದೋಣಿ ಪಲ್ಟಿ, ಮೀನುಗಾರರ ರಕ್ಷಣೆ

ಮಂಗಳೂರು : ಸುರತ್ಕಲ್ ದೊಡ್ಡಕೊಪ್ಲದಲ್ಲಿ ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿಯಾಗಿದ್ದು, ದೋಣಿಯಲ್ಲಿದ್ದ 6 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.
ದೋಣಿ ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟಿತ್ತು. ದೋಣಿಯಲ್ಲಿ ತಮಿಳುನಾಡು ಮೂಲದ 6 ಮಂದಿ ಮೀನುಗಾರರಿದ್ದರು. ಮೀನುಗಾರಿಕೆ ವೇಳೆ ಸಮುದ್ರದ ಅಲೆಗಳ ಹೊಡೆತಕ್ಕೆ ದೋಣಿ ಪಲ್ಟಿಯಾಗಿದೆ. ದೋಣಿ ಪಲ್ಟಿಯಾದ ರಭಸಕ್ಕೆ ಮೀನುಗಾರರು ಸಮುದ್ರಕ್ಕೆ ಬಿದ್ದಿದ್ದಾರೆ. ಈ ವೇಳೆ ಸ್ಥಳೀಯ ಮೀನುಗಾರರು ಅಪಾಯದಲ್ಲಿದ್ದ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ.