ಕೊಳ್ಳೇಗಾಲ: ತಾಲೂಕಿನ ಶಿವನಸಮುದ್ರ ಪಯನಿಯರ್ ಪವರ್ ಸ್ಟೇಷನ್ ಚಾನಲ್ ಬಳಿ ಗುರುವಾರ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಚಾಮರಾಜನಗರ ತಾಲೂಕಿನ ಮೂಡಲಮೋಳೆ ಗ್ರಾಮದ ನಿವಾಸಿ ಮಹೇಶ್ (38) ಮೃತರು. ಈತ ಜು.7ರಂದು ಶಿವನಸಮುದ್ರ ದೇವಸ್ಥಾನದ ದೇವಾಲಯಕ್ಕೆ ಪೂಜೆ ಸಲ್ಲಿಸಲು ಆಗಮಿಸಿದ್ದರು. ಈ ವೇಳೆ ಕಾವೇರಿ ನದಿಯ ನೀರು ನೋಡಲು ಹೋಗಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲುಜಾರಿ ಮೃತ ಪಟ್ಟಿರುವುದಾಗಿ ಮೃತನ ಪತ್ನಿ ಸುಚಿತ್ರಾ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶವವನ್ನು ನೀರಿನಿಂದ ಮೇಲಕ್ಕೆತ್ತಿ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ.