ಜಿಲ್ಲೆ

ದೇವಸ್ಥಾನದ ಹೊಂಡದಲ್ಲಿ ಶವ ಪತ್ತೆ

ವೀರೇಶ ಸೌದ್ರಿ

ಮುಂಡಗೋಡ: ಪಟ್ಟಣದ ಬಸವೇಶ್ವರ ದೇವಸ್ಥಾನದ ಹೊಂಡದಲ್ಲಿ ವ್ಯಕ್ತಿಯೊಬ್ಬನ ಶವ ಸೋಮವಾರ ಪತ್ತೆಯಾಗಿದೆ.

ಮೃತನನ್ನು ಕಂಬಾರಗಟ್ಟಿಯ ನಿವಾಸಿ ಶಿವಾಜಿ ಬೂಶೆಟ್ಟಿ (56) ಎಂದು ಗುರುತಿಸಲಾಗಿದೆ. ಹೊಂಡದಲ್ಲಿ ಶವ ತೇಲಾಡುತ್ತಿರುವುದನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿ ಶಾಮಕ ದಳದವರು ಶವವನ್ನು ಹೊರಕ್ಕೆ ತೆಗೆದಿದ್ದಾರೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.