ಜಿಲ್ಲೆ

ಬೊಳ್ಳಜೀರ ಅಯ್ಯಪ್ಪ ಅಧಿಕಾರ ಸ್ವೀಕಾರ

ಮಡಿಕೇರಿ:

ಕೊಡಗು ಪ್ರೆಸ್ ಕ್ಲಬ್ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ ಸೆ.೨೨ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಮಡಿಕೇರಿ ಸಮೀಪದ ಕ್ಯಾಪಿಟಲ್ ವಿಲೇಜ್‌ನಲ್ಲಿ ನಡೆಯಲಿದೆ.

ಹಿರಿಯ ಪತ್ರಕರ್ತ ಜಿ.ರಾಜೇಂದ್ರ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ನೂತನ ಅಧ್ಯಕ್ಷರಾಗಿ ಬೊಳ್ಳಿಜೀರ ಬಿ.ಅಯ್ಯಪ್ಪ ಹಾಗೂ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷೆ ಬಿ.ಆರ್.ಸವಿತಾ ರೈ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.