ಜಿಲ್ಲೆ

ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಬೊಳ್ಳಜೀರ ಬಿ.ಅಯ್ಯಪ್ಪ ಆಯ್ಕೆ

ಮಡಿಕೇರಿ: ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಬೊಳ್ಳಜೀರ ಬಿ.ಅಯ್ಯಪ್ಪ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎಂ.ಕೆ.ಆದರ್ಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಹಿರಿಯ ಉಪಾಧ್ಯಕ್ಷರಾಗಿ ನವೀನ್ ಡಿಸೋಜ, ಉಪಾಧ್ಯಕ್ಷರಾಗಿ ವನಿತಾ ಚಂದ್ರಮೋಹನ್, ಖಜಾಂಚಿಯಾಗಿ ಚೀಯಂಡಿ ತೇಜಸ್ ಪಾಪಯ್ಯ, ಸಂಘಟನಾ ಕಾರ್ಯದರ್ಶಿಯಾಗಿ ಕೆ.ಜೆ.ಶಿವರಾಜ್, ಸಹ ಕಾರ್ಯದರ್ಶಿಯಾಗಿ ವಿ.ವಿ.ಅರುಣ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ನಿರ್ದೇಶಕರಾಗಿ ಕೆ.ಎಂ.ವಿನೋದ್, ಎಂ.ಆರ್.ಲೋಹಿತ್, ಕೆ.ಎಸ್.ಲೋಕೇಶ್, ಕೆ.ಎಂ.ಇಸ್ಮಾಯಿಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮನಿರ್ದೇಶನ ಸದಸ್ಯರನ್ನಾಗಿ ಬಿ.ಜೆ.ಪ್ರದೀಪ್(ಸತ್ಯ ಮಂಜು), ಅಜ್ಜಮಾಡ ರಮೇಶ್ ಕುಟ್ಟಪ್ಪ, ಬಿ.ಆರ್.ಸವಿತಾ ರೈ, ಮಚ್ಚಮಾಡ ಅನೀಶ್ ಮಾದಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕ ಕೊಡವ ಸಾಹಿತ್ಯ ಮತ್ತು ಸಾಂಸ್ಕೃತಿಕ ಅಕಾಡೆಮಿ ರಿಜಿಸ್ಟ್ರಾರ್ ಅಜ್ಜಿಕುಟ್ಟಿರ ಸಿ.ಗಿರೀಶ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.