ಜಿಲ್ಲೆ

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ ಕರೆ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಕೆಲವು ವಿಮಾನಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹುಸಿ ಬಾಂಬ್​ ಬೆದರಿಕೆ ಬಂದಿದೆ. ಈ ಕುರಿತಾಗಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

ಬಾಂಬ್​ ಬೆದರಿಕೆ ಕಳಸಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಮ್ಯಾನೇಜರ್ ಗೀತಾ ರಾಣಿ ಅವರು ಮೇ 2 ರಂದು ದೂರು ದಾಖಲಿಸಿದ್ದು. ಏಪ್ರಿಲ್ 29 ರಂದು ಬೆಳಿಗ್ಗೆ ವಿಮಾನ ನಿಲ್ದಾಣದ ಮೇಲ್ ಐಡಿಗೆ, 209.85.218.54 ಐಪಿ ವಿಳಾಸದೊಂದಿಗೆ 666darktriad666@gmail.com ಇಮೇಲ್ ವಿಳಾಸದಿಂದ ‘Terrorzers111’ ಗುಂಪಿನಿಂದ ಬಾಂಬ್​ ಬೆದರಿಕೆ ಮೇಲ್​ ಬಂದಿದೆ ಎಂದು ದೂರಿನಲ್ಲಿ ದಾಖಲಿಸಿದ್ದಾರೆ.

“ವಿಮಾನದಲ್ಲಿ ಟೈಂ ಬಾಂಬ್​ ಇಡಲಾಗಿದೆ. ಯಾವುದೇ ಸಮಯದಲ್ಲಿ ಸ್ಫೋಟಗೊಳ್ಳಬಹುದು. ಜೊತೆಗೆ, ಗುಂಪಿನಿಂದ ಟರ್ಮಿನಲ್ 1 ರ ಒಳಗೆ ವಿವಿಧ ಸ್ಥಳಗಳಲ್ಲಿ ಸ್ಫೋಟಕ ವಸ್ತುಗಳನ್ನು ಇರಿಸಲಾಗಿದೆ” ಅಂತ ಮೇಲ್​ ಬಂದಿದೆ ಎಂದು ವಿಮಾನ ನಿಲ್ದಾಣ ಸಿಬ್ಬಂದಿ ತಿಳಿಸಿದರು.

ವಿಮಾನ ನಿಲ್ದಾಣ ಸಿಬ್ಬಂದಿಯ ದೂರಿನ ಆಧಾರದ ಮೇಲೆ, ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ IPC ಸೆಕ್ಷನ್‌ಗಳು 501 (1) (ಬಿ), ಸೆಕ್ಷನ್ 507 ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ.