ಜಿಲ್ಲೆ

ಉಚಿತ ನೋಟ್ ಪುಸ್ತಕ ವಿತರಣೆ

ಸುನಿಲ್ ಪೊನ್ನೇಟಿ

ಮಡಿಕೇರಿ:

ಬಜೆಗುಂಡಿ ಕುಸುಬೂರ್ ಮೊಗೇರ ಸೇವಾ ಸಮಾಜದ ಗ್ರಾಮ ಸಮಿತಿ ವತಿಯಿಂದ ಪ್ರಾಥಮಿಕ, ಪ್ರೌಢ ಶಾಲೆ, ಪಿಯುಸಿ ಹಾಗೂ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಿಸಲಾಯಿತು.

ಕಾರ್ಯಕ್ರಮವನ್ನು ಮೊಗೇರ ಸಮಾಜದ ಜಿಲ್ಲಾಧ್ಯಕ್ಷ ಗೌತಮ್ ಶಿವಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯೆಯಿಂದ ಮಾತ್ರ ಕಳೆದುಕೊಂಡಿದನ್ನು ಮರಳಿ ಪಡೆಯಲು ಸಾಧ್ಯ. ಆದ್ದರಿಂದ ಸಮಾಜದ ಮಕ್ಕಳು ಉನ್ನತ ಶಿಕ್ಷಣ ಪಡೆಯುವತ್ತ ಗಮನ ಹರಿಸಬೇಕು. ಪೋಷಕರು ಕೂಡ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹಿಸಬೇಕೆಂದು ಕರೆ ನೀಡಿದರು.

ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ಹಾಗೂ ಇತರೆ ಯಾವುದೇ ರೀತಿಯ ಅನಾನುಕೂಲ ಇದ್ದಲ್ಲಿ ಪೋಷಕರು ಸಂಘದ ಗಮನಕ್ಕೆ ತರುವಂತೆ ಸಲಹೆ ನೀಡಿದರು.
ಸೋಮವಾರಪೇಟೆ ತಾಲೂಕಿನ ಮಾಜಿ ಅಧ್ಯಕ್ಷ ಬಿ.ಎಂ.ದಾಮೋದರ ಮಾತನಾಡಿ, ಗ್ರಾಮ ಸಮಿತಿಯು ಸಮುದಾಯದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕರಿಸುತ್ತಿರುವುದನ್ನು ಶ್ಲಾಘಿಸಿದರು.

ಸಭೆಯಲ್ಲಿ ಗ್ರಾಮ ಸಮಿತಿ ಅಧ್ಯಕ್ಷ ನಾರಾಯಣ, ತಾಲೂಕು ಸಮಿತಿ ಸದಸ್ಯರಾದ ಶಿವಾನಂದ, ಶಿವಕುಮಾರ್, ಗ್ರಾ.ಪಂ ಸದಸ್ಯರಾದ ಸುಧಾ ಗಣೇಶ್, ಕುಮಾರ ಹಾಗೂ ಗ್ರಾಮ ಸಮಿತಿ ಕಾರ್ಯದರ್ಶಿ, ಖಜಾಂಚಿ, ಪದಾಧಿಕಾರಿಗಳು, ಮಕ್ಕಳ ಪೋಷಕರು ಇದ್ದರು.