ಧಾರವಾಡ: ನಗರದ ವನಿತಾ ಸೇವಾ ಸಮಾಜದ ವನಿತಾ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ನಗರದ ಸ್ವಾಮಿ ವಿವೇಕಾನಂದ ಯೂತ್ ಮೂವಮೆಂಟ್ ವತಿಯಿಂದ ಅಭ್ಯಾಸ ಪುಸ್ತಕಗಳನ್ನು ಇತ್ತೀಚೆಗೆ ವಿತರಿಸಲಾಯಿತು. ಸ್ವಾಮಿ ವಿವೇಕಾನಂದ ಯೂತ್ ಮೂವಮೆಂಟ್ ಮುಖ್ಯಸ್ಥ ಕೆ.ಎಸ್. ಜಯಂತ್, ವನಿತಾ ಸೇವಾ ಸಮಾಜದ ಕಾರ್ಯದರ್ಶಿ ಮಧುರಾ ಹೆಗಡೆ, ಪ್ರೌಢಶಾಲೆ ಮುಖ್ಯಾಧ್ಯಾಪಕ ಐ.ಎಚ್.ಪೂಜಾರ, ಶಿಕ್ಷಕ ಮಲ್ಲಿಕಾರ್ಜುನ ಹಳ್ಳೂರ, ಇತರರು ಇದ್ದರು.