ಗಂಗೊಳ್ಳಿ: ಬೈಂದೂರು ವಲಯದ ಹೊಸಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣಾ ಕಾರ್ಯಕ್ರಮ ಸೋಮವಾರ ನಡೆಯಿತು.
ಎಸ್‌ಡಿಎಂಸಿ ಅಧ್ಯಕ್ಷೆ ರೇಖಾ ಗಣೇಶ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಸತ್ಯಸಾಯಿ ಸಂಸ್ಥೆ ಜಿಲ್ಲಾಧ್ಯಕ್ಷ ಸಂದೀಪ್ ರಾವ್, ಸಾಕ್ಷಿ ಸಂದೀಪ್ ರಾವ್, ಭಾನುಮತಿ, ರಾಕೇಶ್ ರಾವ್, ಹೊಸಾಡು ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ ಅರಾಟೆ, ಡಾ.ಕಿಶೋರ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಕುಂದಾಪುರದ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆ ವತಿಯಿಂದ ಶಾಲೆ ವಿದ್ಯಾರ್ಥಿಗಳಿಗೆ ಪುಸ್ತಕ ಉಚಿತವಾಗಿ ವಿತರಿಸಲಾಯಿತು. ಮುಖ್ಯಶಿಕ್ಷಕ ರಾಜೇಶ್ ಪಡುಕೋಣೆ ಸ್ವಾಗತಿಸಿದರು. ಶಿಕ್ಷಕಿಯರಾದ ಪ್ರತಿಮಾ ಜಿ. ನಿರೂಪಿಸಿದರು. ಲೀಲಾ ಜಿ. ವಂದಿಸಿದರು.