ವಿರಾಜಪೇಟೆಯ ಕಾವೇರಿ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದ ಪುಸ್ತಕ ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ಪುಸ್ತಕಗಳನ್ನು ವೀಕ್ಷಿಸಿದರು. 
ಜಿಲ್ಲೆ

ಕಾವೇರಿ ಪದವಿ ಕಾಲೇಜಿನಲ್ಲಿ ಪುಸ್ತಕ ಪ್ರದರ್ಶನ

ವಿರಾಜಪೇಟೆ: ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದ ಪಿತಾಮಹ ಪದ್ಮಶ್ರೀ ಡಾ.ಎಸ್.ಆರ್.ರಂಗನಾಥನ್ ಅವರ 132 ನೇ ಜನ್ಮದಿನ, ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಪ್ರಯುಕ್ತ ಇಲ್ಲಿನ ಕಾವೇರಿ ಪದವಿ ಕಾಲೇಜಿನಲ್ಲಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಕೇಂದ್ರ ವತಿಯಿಂದ ಸೋಮವಾರ ಪುಸ್ತಕ ಪ್ರದರ್ಶನ ಆಯೋಜಿಸಲಾಗಿತ್ತು.

ಕಾಲೇಜು ಪ್ರಾಂಶುಪಾಲ ಬೆನಡಿಕ್ಟ್ ಸಲ್ದಾನ ರಂಗನಾಥನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳಿಗೆ ಪುಸ್ತಕವನ್ನು ಪರಿಚಯಿಸುವ ನಿಟ್ಟಿನಲ್ಲಿ ಹಾಗೂ ಮಕ್ಕಳಲ್ಲಿ ಓದುವ ಹವ್ಯಾಸ ವೃದ್ಧಿಸುವ ಸಲುವಾಗಿ ಕಾಲೇಜಿನ ಗ್ರಂಥಪಾಲಕಿ ಡಾ.ಮುತ್ತಮ್ಮ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಜೀವನ ಚರಿತ್ರೆ, ಶೈಕ್ಷಣಿಕ ಪಠ್ಯ, ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕಗಳು, ಸಾರ್ವಕಾಲಿಕ ಶ್ರೇಷ್ಠತೆಗಳು, ಬೆಸ್ಟ್ ಸೆಲ್ಲರ್‌ಗಳು , ಕಾದಂಬರಿಗಳು, ಕಥೆ, ಕವನ ಸಂಕಲನ, ನಾಟಕ , ನಿಘಂಟುಗಳು, ಮಹಾನ್ ಪುರುಷರ ಜೀವನ ಸಾಧನೆ ತಿಳಿಸುವ ವಿವಿಧ ಪ್ರಕಾರದ ಪುಸ್ತಕಗಳನ್ನು ಪ್ರದರ್ಶಿಸಿಲಾಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗ ಇದ್ದರು.