ಜಿಲ್ಲೆ

ಪುಸ್ತಕ ಬಿಡುಗಡೆ ಇಂದು

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ

ಕರ್ನಾಟಕ ವಿದ್ಯಾವರ್ಧಕ ಸಂಘವು ಯಲ್ಲಪ್ಪ ರಾಮಪ್ಪ ತಂಬೂರ ಸ್ಮರಣಾರ್ಥ ದತ್ತಿ ನಿಮಿತ್ತ ನ. 26ರಂದು ಸಂಜೆ 6 ಗಂಟೆಗೆ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ಹೂವ ತಂದವರು ಪ್ರಶಸ್ತಿ ಪ್ರದಾನ ಹಾಗೂ ನೆನಪಿನಂಗಳ ಪುಸ್ತಕ ಬಿಡುಗಡೆ ಸಮಾರಂಭ ಏರ್ಪಡಿಸಿದೆ.

ಉಪ ಪೊಲೀಸ್​ ವರಿಷ್ಠಾಧಿಕಾರಿ ಶಿವಾನಂದ ಕಟಗಿ ಪುಸ್ತಕ ಬಿಡುಗಡೆ ಮಾಡುವರು. ಅತಿಥಿಯಾಗಿ ಸಂಗೀತಗಾರ ಡಾ. ಮೃತ್ಯುಂಜಯ ಶೆಟ್ಟರ ಆಗಮಿಸುವರು. ಅತಿಥಿ ಉಪನ್ಯಾಸಕರಾಗಿ ಹೇಮಾ ಕಿರೇಸೂರ ಆಗಮಿಸುವರು. ಹುಬ್ಬಳ್ಳಿ ನಗರ ಸಾರಿಗೆ 1ನೇ ಘಟಕದ ನಿರ್ವಾಹಕಿ ರತ್ನವ್ವ ಕುನ್ನೂರ ಅವರಿಗೆ ಹೂವ ತಂದವರು ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮಕ್ಕಳ ಸಾಹಿತಿ ನಿಂಗಣ್ಣ ಕುಂಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ. ಯಶೋಧಾ ನಿಂಬಣ್ಣವರ (ತಂಬೂರ) ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.