ಜಿಲ್ಲೆ

ಕಿರು ಪುಸ್ತಕ ಬಿಡುಗಡೆ 23ರಂದು

Dharwada - Vikram Nadiger

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಪ್ರಗತಿಯ ಕಿರು ಪುಸ್ತಕ ಬಿಡುಗಡೆ ಸಮಾರಂಭವನ್ನು ಏ. 23ರಂದು ಬೆಳಗ್ಗೆ 11 ಗಂಟೆಗೆ ಜಿಪಂ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್​ ಕಾರ್ಯಕ್ರಮ ಉದ್ಘಾಟಿಸುವರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್​, ಶಾಸಕರಾದ ಅಬ್ಬಯ್ಯ ಪ್ರಸಾದ, ಎನ್​.ಎಚ್​. ಕೋನರಡ್ಡಿ, ಮಹೇಶ ಟೆಂಗಿನಕಾಯಿ, ಎಂ.ಆರ್​.ಪಾಟೀಲ, ಎಸ್​.ವಿ.ಸಂಕನೂರ, ಪ್ರದಿಪ ಶೆಟ್ಟರ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಮೇಯರ್​, ಪಾಲಿಕೆ ಸದಸ್ಯರು, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರು, ಅಧಿಕಾರಿಗಳು, ಇತರರು ಪಾಲ್ಗೊಳ್ಳುವರು. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸುವರು.