ಜಿಲ್ಲೆ

ಬೋರ್​ವೆಲ್​ ಲಾರಿ ಅಪಘಾತ: ಸ್ಥಳದಲ್ಲೇ ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ

ರಮೇಶ್​ ಕುಮಾರ್​​ ಬಿ ಎಡಮೋಳೆ

ಚಿಕ್ಕಬಳ್ಳಾಪುರ: ಬೋರ್​ವೆಲ್​ ಲಾರಿ ಮಗುಚಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ದುರಂತ ಸಾವಿಗೀಡಾಗಿರುವ ಘಟನೆ ಬಾಗೇಪಲ್ಲಿ ತಾಲ್ಲೂಕಿನ ಹೊಸಹುಡ್ಯ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.

ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯ‌ಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯಪ್ರದೇಶ ಮೂಲದ ಇಬ್ಬರು ಹಾಗೂ ಛತ್ತೀಸ್​ಗಢದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ತ್ರಿಪಕ್ಷೀಯ ಸಭೆಯಲ್ಲಿ ಚೀನಾಕ್ಕೆ ಪರೋಕ್ಷ ಚಾಟಿ

ಘಟನಾ ಸ್ಥಳಕ್ಕೆ ಚೇಳೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)