ಮೈಸೂರು: ಮೈಸೂರು ತಾಲೂಕಿನ ದೇವಗಳ್ಳಿ ಗ್ರಾಮದಲ್ಲಿ ವಿದ್ಯುತ್ ಪ್ರವಹಿಸಿ 7 ವರ್ಷದ ಬಾಲಕ ಮೃತಪಟ್ಟಿದ್ದಾನೆ.
ಗ್ರಾಮದ ನಿವಾಸಿ ಸುಂದರೇಶ್ ಅವರ ಪುತ್ರ ಭುವಿತ(7) ಮೃತ ಬಾಲಕ. ಶನಿವಾರ ಭುವಿತ ಮನೆಯಲ್ಲಿನ ಸ್ವೀಚ್ ಆನ್ ಮಾಡುವಾಗ ವಿದ್ಯುತ್ ಪ್ರವಹಿಸಿ ಬಿದ್ದಿದ್ದಾನೆ. ತಕ್ಷಣ ಪಾಲಕರು ಆಸ್ಪತ್ರೆಗೆ ದಾಖಲಿಸಿದರು.
ಚಿಕಿತ್ಸೆ ಫಲಕಾರಿ ಆಗದೆ ಭಾನುವಾರ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೈಸೂರು ತಾಲೂಕಿನ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.