ಜಿಲ್ಲೆ

ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕ ನೀರು ಪಾಲು

Webdesk - Manjunatha B

ಬೆಂಗಳೂರು: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕನೋರ್ವ ಕೆರೆಯಲು ಮುಳುಗಿ ಮೃತಪಟ್ಟಿರುವ ಘಟನೆ ಬೆಂಗಳೂರು ನಗರದ ಮಾಗಡಿ ರಸ್ಸುಂತೆಯಲ್ಲಿರುವ ಸುಂಕದಕಟ್ಟೆಯಲ್ಲಿರುವ ಪಿಳ್ಳಪ್ಪನಕಟ್ಟೆ ಕೆರೆಯಲ್ಲಿ ನಡೆದಿದೆ.

ಮೃತ ಬಾಲಕನನ್ನು ಮೊಯಿನುದ್ದೀನ್​(13) ಎಂದು ಗುರುತಿಸಲಾಗಿದ್ದು, ಶನಿವಾರ ಮಧ್ಯಾಹ್ನ ಈತ ನಮಾಜ್​ ಮಾಡಲು ಹೋಗುತ್ತಿರುವುದಾಗಿ ಹೇಳಿ ಮನೆಯಿಂದ ಹೊರಟ್ಟಿದ್ದ. ಬಳಿಕ ತನ್ನ ಸ್ನೇಹಿತರ ಜೊತೆ ಪಿಳ್ಳಪ್ಪನಕಟ್ಟೆ ಕೆರೆಯಲ್ಲಿ ಈಜಲು ಹೋಗಿ ದಾರುಣ ಅಂತ್ಯ ಕಂಡಿದ್ದಾನೆ.

ಬಾಲಕ ಮುಳುಗಿರುವ ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸ್​ ಅಧಿಕಾರಿಗಳು ಬಾಲಕನ ಮೃತದೇಹದ ಹುಡುಕಾಟದಲ್ಲಿ ನಿರತರಾಗಿದ್ದಾರೆ.