ಶಿರ್ವ: ಬಂಟಕಲ್ಲು ಶ್ರೀ ಬಬ್ಬು ದೈವಸ್ಥಾನದಲ್ಲಿ ಏ.16ರಿಂದ ಏ.19ರವರೆಗೆ ಪರ್ಯಂತ ನೂತನ ದೈವಸ್ಥಾನ ಪುನಃ ಪ್ರತಿಷ್ಠಾಪನೆ, ಬ್ರಹ್ಮಕಲಶೋತ್ಸವ, ನೇಮೋತ್ಸವ, ಧಾರ್ಮಿಕ ಸಭೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು.
ಗ್ರಾಮದ ಅಭಿವೃದ್ಧಿ ಹಾಗೂ ಭಕ್ತರ ಶ್ರೇಯೋಭಿವೃದ್ಧಿಗಾಗಿ ಸಾನಿಧ್ಯವನ್ನು ವಾಸ್ತುತಜ್ಞರ ಮಾರ್ಗದರ್ಶನದಲ್ಲಿ ಜೀರ್ಣೋದ್ಧಾರ ಮಾಡಲಾಗಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸಡಂಬೈಲು ಭಾಸ್ಕರ ಶೆಟ್ಟಿ ಹೇಳಿದರು.
ಹಿರಿಯರಾದ ದೇವದಾಸ್ ಜೋಗಿ, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ಬಿ.ಪುಂಡಲೀಕ ಮರಾಠೆ, ದೈವಸ್ಥಾನ ಗುರಿಕಾರ ಹಾಗೂ ಸಮಿತಿ ಕಾರ್ಯಾಧ್ಯಕ್ಷ ಶಂಕರ ಪದಕಣ್ಣಾಯ, ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ರಾಮರಾಯ ಪಾಟ್ಕರ್, ಸಹ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ಪ್ರಸಾದ್, ಹಿರಿಯರಾದ ಶೇಖರ ಪೂಜಾರಿ, ಮಧ್ಯಸ್ಥರು ರಾಮಕೃಷ್ಣ ನಾಯಕ್, ಮಂಜುನಾಥ ಪಾಟ್ಕರ್, ಮಂಜುನಾಥ ಪೂಜಾರಿ, ಧ.ಗ್ರಾ.ಯೋಜನೆ ಸೇವಾನಿರತೆ ಪೂರ್ಣಿಮಾ ರಮೆಶ್ ಆಚಾರ್ಯ, ಹರೀಶ್ ಹೇರೂರು, ರವೀಂದ್ರ ಆಚಾರ್ಯ, ಸದಾನಂದ ಎಸ್, ಪ್ರಧಾನ ಅರ್ಚಕ ಸಂತೋಷ್.ಆರ್. ಉಪಸ್ಥಿತರಿದ್ದರು. ಸುಕನ್ಯಾ ಜೋಗಿ ಪ್ರಾರ್ಥಿಸಿದರು. ದಿನೇಶ್.ಎಸ್ ವಂದಿಸಿದರು. ಸತ್ಯಸಾಯಿ ಪ್ರಸಾದ್ ನಿರೂಪಿಸಿದರು.