ಮೂಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಮಾನಂಪಾಡಿ ಶ್ರೀ ವೀರಭದ್ರ ಮಹಾಮ್ಮಾಯಿ ದೇವಸ್ಥಾನದಲ್ಲಿ ಶ್ರೀ ನಾಗದೇವರ ಪುನ@ಪ್ರತಿಷ್ಠಾಪನೆ, ಬ್ರಹ್ಮಕಲಶಾಭಿಷೇಕ ನಡೆಯಿತು.
ಶಿಬರೂರು ವೇದವ್ಯಾಸ ತಂತ್ರಿಗಳ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಬ್ರಹ್ಮಕಲಶಾಧಿವಾಸ, ಬಿಂಬ ಪ್ರತಿಷ್ಠಾಪನೆ, ಅಧಿವಾಸ ಹೋಮ, ಶ್ರೀ ನಾಗದೇವರಿಗೆ ಬ್ರಹ್ಮಕಲಶಾಭಿಷೇಕ, ಆಶ್ಲೇಷಾ ಬಲಿ, ಪವಮಾನ ಹೋಮ, ಮಹಾಪೂಜೆ, ವಟು ಆರಾಧನೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ನಾಗ ತನು ತರ್ಪಣ, ಪ್ರಸನ್ನ ಪೂಜೆ, ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ ನೆರವೇರಿತು.
ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು, ಭುವನಾಭಿರಾಮ ಉಡುಪ ಕಿನ್ನಿಗೋಳಿ, ೇತ್ರದ ಆಡಳಿತ ಮೊಕ್ತೇಸರ ಪುರಂದರ ಶೆಟ್ಟಿಗಾರ್ ಹಾಗೂ ಗುರಿಕಾರರು ಗ್ರಾಮಸ್ಥರು ಉಪಸ್ಥಿತರಿದ್ದರು.