ಯುವವಾಹಿನಿ ಬಂಟ್ವಾಳ ತಾಲೂಕು ಘಟಕ ಆಶ್ರಯದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿದರು. ಶಾಸಕ ರಾಜೇಶ್ ನಾೖಕ್ , ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಮತ್ತಿತರರಿದ್ದರು. 
ಜಿಲ್ಲೆ

ಜೀವನಕ್ಕೆ ಬೇಕು ಗುರುಗಳ ತತ್ವ : ಬಂಟ್ವಾಳ ಶಾಸಕ ರಾಜೇಶ್ ನಾೖಕ್ ಅನಿಸಿಕೆ

ಸೌಮ್ಯ ಆರ್

ವಿಜಯವಾಣಿ ಸುದ್ದಿಜಾಲ ಬಂಟ್ವಾಳ

ನಾರಾಯಣ ಗುರುಗಳ ತತ್ವ, ಸಂದೇಶದ ಆದರ್ಶಗಳನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು, ಈ ಆದರ್ಶಗಳು ಮುಂದಿನ ಜೀನವನಕ್ಕೆ ದಾರಿದೀಪ ಎಂದು ಬಂಟ್ವಾಳ ಶಾಸಕ ರಾಜೇಶ್ ನಾೖಕ್ ಹೇಳಿದರು.

ಯುವವಾಹಿನಿ ಬಂಟ್ವಾಳ ತಾಲೂಕು ಘಟಕ ಆಶ್ರಯದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಶ್ರೀ ನಾರಾಯಣ ಗುರು ವಸತಿ ಶಾಲೆ ಪುಂಜಾಲಕಟ್ಟೆ ಸಹಯೋಗದೊಂದಿಗೆ ಪುಂಜಾಲಕಟ್ಟೆಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ನಾರಾಯಣ ಗುರುಗಳು ಇಡೀ ಮನುಕುಲದ ಗುರುಗಳು ಎಂದರು. ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅಧ್ಯಕ್ಷತೆ ವಹಿಸಿದ್ದರು.

35 ವರ್ಷಗಳಿಂದ ಸಮಾಜದ ಏಳಿಗೆಗಾಗಿ ದುಡಿಯುತ್ತಿರುವ ಯುವವಾಹಿನಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮುಖ್ಯಪಾತ್ರ ವಹಿಸಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ.ತುಂಗಪ್ಪ ಬಂಗೇರ ತಿಳಿಸಿದರು.

ಶಿಕ್ಷಕ ಮಹೇಶ್ ಕರ್ಕೇರ ಗುರು ಜಯಂತಿ ಪ್ರಯುಕ್ತ ವಿಶೇಷ ಉಪನ್ಯಾಸ ನೀಡಿ, ಮೌನಕ್ರಾಂತಿಯ ಮೂಲಕ ಪರಿವರ್ತನೆಯ ದೀಪ ಬೆಳಗಿದ ದಾರ್ಶನಿಕ ನಾರಾಯಣ ಗುರು ಎಂದರು. ಪುಂಜಾಲಕಟ್ಟೆ ಶ್ರೀ ನಾರಾಯಣಗುರು ವಸತಿ ಶಾಲೆ ಮುಖ್ಯಶಿಕ್ಷಕ ಸಂತೋಷ ಕುಮಾರ್ ಉಪಸ್ಥಿತರಿದ್ದರು.

ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ಸ್ವಾಗತಿಸಿ, ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಪ್ರಜಿತ್ ಅಮೀನ್ ವಂದಿಸಿ, ಧನುಷ್ ಮದ್ವ ನಿರೂಪಿಸಿದರು.

ಬಹುಮಾನ ವಿತರಣೆ

ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಹಯೋಗದೊಂದಿಗೆ, ಬ್ರಹ್ಮಶ್ರೀ ನಾರಾಯಣಗುರುಗಳ ಕುರಿತು ನಡೆದ ಭಾಷಣ ಸ್ಪರ್ಧೆಯ ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಧನುಶ್ರೀ ಸಿದ್ದಕಟ್ಟೆ, ದ್ವಿತೀಯ ಅಪೇಕ್ಷ ಸಿದ್ದಕಟ್ಟೆ, ತೃತೀಯ ಪ್ರಗತಿ ಮಾಣಿ, ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ನಿನಾದ್ ಕೈರಂಗಳ, ದ್ವಿತೀಯ ದೀಕ್ಷಾ ಸುವರ್ಣ ಬೋಳಂತೂರು, ತೃತೀಯ ವಿಶ್ಮಾ ಸುವರ್ಣ ಬಂಟ್ವಾಳ ಅವರಿಗೆ ಬಹುಮಾನ ವಿತರಿಸಲಾಯಿತು.