ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ ಬ್ರಾೃಂಡ್ ಮಂಗಳೂರು ಪ್ರಶಸ್ತಿಗೆ ಪತ್ರಕರ್ತ ಮಿಥುನ ಕೊಡೆತ್ತೂರ್ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 5,001 ರೂ.ನಗದು , ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆ ಒಳಗೊಂಡಿದೆ. ಜೂ.27ರಂದು ಬೆಳಗ್ಗೆ 11ಕ್ಕೆ ನಗರದ ಪತ್ರಿಕಾಭವನದಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಪ್ರಶಸ್ತಿ ಪ್ರದಾನ ಮಾಡುವರು. ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಕ್ರೆಡೈ ಅಧ್ಯಕ್ಷ ವಿನೋದ್ ಪಿಂಟೊ, ಜಿಲ್ಲಾ ಆಯುಷ್ ಅಧಿಕಾರಿ ಇಕ್ಬಾಲ್ , ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಂಘದ ಪ್ರಧಾನ
ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.