ಮಂಗಳೂರು : ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ನಡೆದ ಬ್ರಾೃಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾಟದಲ್ಲಿ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ತಂಡ ಚಾಂಪಿಯನ್‌ಶಿಪ್ ಪಡೆಯಿತು. ಮಂಗಳೂರು ನಗರ ಪೊಲೀಸ್ ಕಮಿಷನರ್ ತಂಡ ದ್ವಿತೀಯ ಪ್ರಶಸ್ತಿ ಗಳಿಸಿತು.
ಮಂಗಳೂರು ನಗರ ಪೊಲೀಸ್ ಕಮಿಷನರ್ ತಂಡದ ರಂಜನ್ ಉತ್ತಮ ಬೌಲರ್, ಸಿದ್ದಾರ್ಥ ಉತ್ತಮ ಬ್ಯಾಟ್ಸ್‌ಮನ್ ಮತ್ತು ಎಸ್‌ಪಿ ತಂಡದ ಶಿವಕುಮಾರ್ ಅಂತಿಮ ಪಂದ್ಯದ ಪಂದ್ಯ ಪುರುಷ ಹಾಗೂ ಸರಣಿ ಶ್ರೇಷ್ಠ ವೈಯಕ್ತಿಕ ಪ್ರಶಸ್ತಿ ಪಡೆದರು.
ಸಮಾರೋಪ ಸಮಾರಂಭದಲ್ಲಿ ಅದಾನಿ ಸಮೂಹ ಸಂಸ್ಥೆಯ ಅಧ್ಯಕ್ಷ ಕಿಶೋರ್ ಆಳ್ವ ಬಹುಮಾನ ವಿತರಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ , ದ.ಕ. ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ , ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಉಪಸ್ಥಿತರಿದ್ದರು. ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಬಹುಮಾನಿತರ ವಿವರ ನೀಡಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.ಕೋಶಾಧಿಕಾರಿ ಪುಷ್ಪರಾಜ್.ಬಿ.ಎನ್.ಕಾರ್ಯಕ್ರಮ ನಿರೂಪಿಸಿದರು.