ಎನ್.ಆರ್.ಪುರದಲ್ಲಿ ನಡೆದ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಬೇಬಿ ಮಾಹಿತಿ ನೀಡಿದರು. ಜುಬೇದಾ, ಮುನಾವರ್‌ಪಾಷಾ, ಅನಿತಾ, ಆಶಾ,ಕುಸುಮ, ವಿಜಯಕುಮಾರಿ ಇದ್ದರು. 
ಜಿಲ್ಲೆ

ಸ್ತನ್ಯಪಾನದಿಂದ ರೋಗ ನಿರೋಧಕ ಶಕ್ತಿ ಹೆಚ್ಚಳ

ಜಿ.ಹೆಚ್. ಧನ್ಯಕುಮಾರ್

ಎನ್.ಆರ್.ಪುರ: ಹುಟ್ಟಿದ ಮಗುವಿಗೆ ಸ್ತನ್ಯಪಾನ ಮಾಡಿಸುವುದರಿಂದ ಮಗುವಿಗೆ ರೋಗ ನಿರೋಧಕ ಶಕ್ತಿ ಹೆಚ್ಚಾಗಲಿದೆ ಎಂದು ಪಟ್ಟಣ ಪಂಚಾಯಿತಿ ಸದಸ್ಯೆ ಜುಬೇದ ಹೇಳಿದರು.
ಪಟ್ಟಣದ ಮೇದರ ಬೀದಿಯಲ್ಲಿರುವ ಅಂಗನವಾಡಿಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಎದೆ ಹಾಲು ಅಮೃತಕ್ಕೆ ಸಮಾನ. ಎದೆ ಹಾಲನ್ನು ಕುಡಿಸುವುದರಿಂದ ಸೌಂದರ್ಯ ಹಾಳಾಗುತ್ತದೆ ಎಂಬುದು ಕೆಲವು ಮಹಿಳೆಯರ ತಪ್ಪು ಕಲ್ಪನೆಯಾಗಿದೆ. ಎದೆ ಹಾಲು ಕುಡಿಸುವುದರಿಂದ ಸ್ತನ ಕ್ಯಾನ್ಸರ್ ಬರುವುದಿಲ್ಲ ಹಾಗೂ ಮಗುವಿಗೂ ಪೌಷ್ಠಿಕ ಆಹಾರ ಸಿಗುತ್ತದೆ ಎಂದರು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಬೇಬಿ ಮಾಹಿತಿ ನೀಡಿ, ವಿಶ್ವದಾದ್ಯಂತ ಆಗಸ್ಟ್ 1ರಿಂದ 7ವರೆಗೆ ವಿಶ್ವ ಸ್ಥನ್ಯಪಾನ ಸಪ್ತಾಹ ಕಾರ್ಯಕ್ರಮ ನಡೆಸಲಾಗುತ್ತದೆ. ಶಿಶುಮರಣ ತಡೆಗಟ್ಟಲು ಹಾಗೂ ಎದೆ ಹಾಲಿನ ಮಹತ್ವ ತಿಳಿಸುವುದು ಈ ಸಪ್ತಾಹದ ಉದ್ದೇಶವಾಗಿದೆ. ಪ್ರಸ್ತುತ ಪಟ್ಟಣ ಹಾಗೂ ತಾಲೂಕಿನ ವಿವಿಧ ಕಡೆ ಡೆಂೆ ಜ್ವರ ಕಾಣಿಸಿರುವುದರಿಂದ ಪ್ರತಿಯೊಬ್ಬರೂ ಮನೆಯ ಸುತ್ತ ನೀರು ನಿಲ್ಲದಂತೆ ಜಾಗ್ರತೆ ವಹಿಸಬೇಕು ಎಂದು ತಿಳಿಸಿದರು.
ಪಪಂ ಸದಸ್ಯ ಮುನಾವರ್‌ಪಾಷಾ, ಸುಪ್ರಿತಾ, ಪೋಷಣ್ ಅಭಿಯಾನದ ಸಂಯೋಜಕ ಕೌಶಿಕ್, ಮೇದರ ಬೀದಿಯ ಅಂಗನವಾಡಿ ಕಾರ್ಯಕರ್ತೆ ಅನಿತಾ, ಸಹಾಯಕಿ ಆಶಾ, ಆಶಾ ಕಾರ್ಯಕರ್ತೆಯರಾದ ಕುಸುಮ, ವಿಜಯಕುಮಾರಿ,ಗಾಯತ್ರಿ ಇದ್ದರು.