ಜಿಲ್ಲೆ

ಸ್ತನ್ಯಪಾನ ಸಪ್ತಾಹ, ಶಿಶು ಪ್ರದರ್ಶನ

ಆದರ್ಶ್. ಎಂ.ಕೆ.

ಮಡಿಕೇರಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಸಹಯೋಗದೊಂದಿಗೆ ಸ್ತನ್ಯಪಾನ ಸಪ್ತಾಹ ಮತ್ತು ಶಿಶು ಪ್ರದರ್ಶನ ಕಾರ್ಯಕ್ರಮವು ಎಂ.ಬಾಡಗ ಅಂಗನವಾಡಿ ಕೇಂದ್ರದಲ್ಲಿ ಸೋಮವಾರ ನಡೆಯಿತು.


ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಸ್ತನ್ಯಪಾನ ಸಪ್ತಾಹವನ್ನು ಆಗಸ್ಟ್ ೭ರವರೆಗೆ ಎಲ್ಲಾ ಅಂಗನವಾಡಿ ಕೇಂದ್ರದಲ್ಲಿ ನಡೆಸಲಾಗಿದೆ ಎಂದ ಅವರು, ಅಂಗನವಾಡಿಯಲ್ಲಿ ದೊರಕುವ ಆಹಾರಗಳನ್ನು ಕೇಂದ್ರದಲ್ಲಿಯೇ ಪರಿಶೀಲಿಸಿ ಪಡೆಯಲು ತಿಳಿಸಿದರು.


ಶಿಶು ಪ್ರದರ್ಶನದಲ್ಲಿ ಪ್ರಾದ್ವಿ(ಪ್ರ) ದಿಶಾ(ದ್ವಿ) ಅದ್ವಿತ್(ತೃ) ಸ್ಥಾನ ಪಡೆದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಗರ್ಭಿಣಿ ಬಾಣಂತಿ ಮತ್ತು ಮಕ್ಕಳ ಪೌಷ್ಟಿಕ ಮಟ್ಟವನ್ನು ಗುರುತಿಸಲಾಯಿತು. ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಲಲಿತಾ, ಕಿರಿಯ ಪ್ರಾಥಮಿಕ ಶಾಲೆ ಬಾಡಗದ ಮುಖ್ಯ ಶಿಕ್ಷಕಿ ಯಮುನಾ, ಸಹ ಶಿಕ್ಷಕಿ ಕುಮುದಿನಿ, ಆಶಾ ಕಾರ್ಯಕರ್ತೆ ಚಂದ್ರಿಕಾ, ಬಾಡಗ ಅಂಗನವಾಡಿ ಕಾರ್ಯಕರ್ತೆ ಬಿ.ಆರ್.ಭವ್ಯ, ಬಿ.ಬಿ.ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.