ಶಿಕ್ಷಕ ವೈ.ಜೆ.ರಾಮೇಗೌಡ  
ಜಿಲ್ಲೆ

ಚಕ್ರ ಎಸೆತದಲ್ಲಿ ಕಂಚಿನ ಪದಕ

ಅಭಿನಯ್ ಎಚ್.ಎಂ

ಬೇಲೂರು: ಚಂಡೀಗಢದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಆಲ್ ಇಂಡಿಯಾ ಸಿವಿಲ್ ಸರ್ವಿಸ್ 2025 ರ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ತಾಲೂಕಿನ ಬೆಳ್ಳವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ವೈ.ಜೆ.ರಾಮೇಗೌಡ ಚಕ್ರ ಎಸೆತದಲ್ಲಿ ಕಂಚಿನ ಪದಕ ಪಡೆದಿದ್ದಾರೆ.

ಕ್ರೀಡಾಕೂಟದಲ್ಲಿ ರಾಜ್ಯ ತಂಡದ ವ್ಯವಸ್ಥಾಪಕನಾಗಿ ಮತ್ತು ಕ್ರೀಡಾಪಟುವಾಗಿ ಭಾಗವಹಿಸಿ ಚಕ್ರ ಎಸೆತದಲ್ಲಿ ಕಂಚಿನ ಪದಕ ಪಡೆಯುವ ಮೂಲಕ ಬೇಲೂರಿಗೆ ಕೀರ್ತಿ ತಂದಿದ್ದಾರೆ.