ಜಿಲ್ಲೆ

ಪಾದಚಾರಿಗೆ ಬಿಆರ್‌ಟಿಎಸ್ ಬಸ್ ಡಿಕ್ಕಿ

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ಬಿಆರ್‌ಟಿಎಸ್ `ಚಿಗರಿ' ಬಸ್ ಪಾದಚಾರಿಗೆ ಡಿಕ್ಕಿ ಹೊಡೆದ ಘಟನೆ ನಗರದ ಟೋಲ್‌ನಾಕಾ ಬಳಿ ಸೋಮವಾರ ಸಂಜೆ ನಡೆದಿದೆ. ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬಸ್ ಡಿಕ್ಕಿ ಹೊಡೆದಿದ್ದರಿಂದ ಆತನ ತಲೆಗೆ ತೀವ್ರ ಪೆಟ್ಟಾಗಿದೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಯುವಕನನ್ನು ಅದೇ ಬಸ್‌ನಲ್ಲಿ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.