ಜಿಲ್ಲೆ

ಮಾಜಿ ಆದ ಒಂದು ತಿಂಗಳ ಬಳಿಕ ತವರು ಕ್ಷೇತ್ರ ಶಿವಮೊಗ್ಗಕ್ಕೆ ಬಿ.ಎಸ್. ಯಡಿಯೂರಪ್ಪ ಆಗಮನ

ಶಿವಮೊಗ್ಗ: ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ತಿಂಗಳ ಬಳಿಕ ತಮ್ಮ ತವರು ಕ್ಷೇತ್ರ ಶಿವಮೊಗಕ್ಕೆ ಆಗಮಿಸಿದ್ದಾರೆ.

ಇಂದು ಶಿವಮೊಗ್ಗದಲ್ಲಿ ವಿನೋಬಾನಗರದಲ್ಲಿರುವ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಬಂದಿದ್ದಾರೆ. ಅವರು ಬರುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

ಇಂದಿನಿಂದ ನಾಲ್ಕು ದಿನಗಳ ಕಾಳ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಮಾಡಲಿರುವ ಯಡಿಯೂರಪ್ಪ, ಇಂದು ಮತ್ತು ನಾಳೆ ಶಿವಮೊಗ್ಗದಲ್ಲೇ ವಾಸ್ತವ್ಯ ಇರಲಿದ್ದಾರೆ. ಭಾನುವಾರ ಬೆಳಗ್ಗೆ ಶಿಕಾರಿಪುರಕ್ಕೆ ತೆರಳಲಿದ್ದು, ಭಾನುವಾರ ಮತ್ತು ಸೋಮವಾರ ಅಲ್ಲಿಯೇ ತಂಗಲಿದ್ದಾರೆ.