ಜಿಲ್ಲೆ

ಬಿಎಸ್‌ವೈ ಅವರನ್ನು ಮುಗಿಸಿದ್ದಾರೆ

Davangere - Desk - Mahesh Babu E

ದಾವಣಗೆರೆ: ರಾಜ್ಯಾದ್ಯಂತ ಸಂಚರಿಸಿ, ಬಿಜೆಪಿಯನ್ನು ಬೂತ್ ಮಟ್ಟದಿಂದ ಬೆಳೆಸಿದ್ದು ಯಡಿಯೂರಪ್ಪ, ಆದರೆ ಅವರನ್ನೇ ರಾಜಕೀಯವಾಗಿ ಮುಗಿಸಿದ್ದಾರೆ ಎನ್ನುವ ಮೂಲಕ ಪಕ್ಷದ ವರಿಷ್ಠರ ವಿರುದ್ಧ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ಮುಂದುವರಿಸಿದ್ದಾರೆ.

ಬಿಜೆಪಿಯಿಂದ ಉಚ್ಚಾಟಿತ ಮಾಜಿ ಶಾಸಕ ಟಿ.ಗುರುಸಿದ್ದನಗೌಡ ಅವರ ದಾವಣಗೆರೆ ನಿವಾಸಕ್ಕೆ ಭಾನುವಾರ ಭೇಟಿ ನೀಡಿದ್ದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ಹಿಂದೆ ಬಿಜೆಪಿ ಅಧ್ಯಕ್ಷರ ಮಾತನಾಡಿದ ಆಡಿಯೋ ವೈರಲ್ ಆಗಿತ್ತು. ಅದರಲ್ಲಿ ಹೇಳಿದಂತೆ ಯಡಿಯೂರಪ್ಪ, ಜಗದೀಶ ಶೆಟ್ಟರ್, ಈಶ್ವರಪ್ಪ ಅವರನ್ನು ರಾಜಕೀಯವಾಗಿ ಮುಗಿಸಿದ್ದಾರೆ ಎಂದು ಕಿಡಿಕಾರಿದರು.