ಜಿಲ್ಲೆ

ಬುದ್ಧ, ಬಸವ, ಅಂಬೇಡ್ಕರ್ ಜಯಂತಿ

ಅವಿನಾಶ್ ಜೈನಹಳ್ಳಿ

ಮೈಸೂರು: ಬುದ್ಧ, ಬಸವ, ಅಂಬೇಡ್ಕರ್ ಅವರಂತಹ ಮಹನೀಯರ ಸ್ಮರಣೆಯೊಂದಿಗೆ ಅವರು ತೋರಿದ ಮಾರ್ಗದಲ್ಲಿ ಮುನ್ನಡೆಯುವ ಸಂಕಲ್ಪ ಮಾಡಬೇಕು ಎಂದು ಸಾಮಾಜಿಕ ಹೋರಾಟಗಾರ ಅಹಿಂದ ಜವರಪ್ಪ ತಿಳಿಸಿದರು.

ತಾಲೂಕಿನ ವರುಣ ಗ್ರಾಮದಲ್ಲಿ ಜೈ ಭೀಮ್ ಯುವಕರ ಸಂಘದ ವತಿಯಿಂದ ಸೋಮವಾರ ಆಯೋಜಿಸಿದ್ದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಾತ್ಮರು ನಡೆದು ಬಂದ ಹಾದಿಯನ್ನು ಸ್ಮರಣೆ ಮಾಡಬೇಕು. ಅವರ ಹಾದಿಯಲ್ಲಿ ನಾವು ನಡೆಯುತ್ತಿದ್ದೇವೆಯೇ ಎಂದು ಆತ್ಮವಲೋಕನ ಮಾಡಿಕೊಳ್ಳಬೇಕು. ತಪ್ಪಿದ್ದರೆ ಸರಿಪಡಿಸಿಕೊಂಡು ಆರೋಗ್ಯಕರವಾದ ಹಾದಿಯಲ್ಲಿ ಮುನ್ನಡೆಯುವ ಶಪಥ ಮಾಡಬೇಕು ಎಂದು ಹೇಳಿದರು.