ಮೈಸೂರು: ಜಿಲ್ಲಾಡಳಿತ, ಕನ್ನಡ ಸಂಸ್ಕೃತಿ ಇಲಾಖೆ ಹಾಗು ಭಗವಾನ್ ಬದ್ಧ ಜಯಂತ್ಯುತ್ಸವ ಸಮಿತಿ ವತಿಯಿಂದ ಮೇ 12 ರಂದು ನಗರದ ಕಲಾ ಮಂದಿರದಲ್ಲಿ ಬುದ್ಧ ಜಯಂತಿ ಆಯೋಜಿಸಲಾಗಿದೆ ಎಂದು ಸಮಿತಿ ಸದಸ್ಯ ಪ್ರೊ.ರುದ್ರೇಗೌಡ ತಿಳಿಸಿದರು.
ಅಂದು ಬೆಳಗ್ಗೆ 9.30ಕ್ಕೆ ಪುರಭವನ ಆವರಣದಿಂದ ಮೆರವಣಿಗೆ ಹೊರಟು ಕೆ.ಆರ್. ವೃತ್ತ, ದೇವರಾಜ ಅರಸು ರಸ್ತೆ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತ್ತ ಮೂಲಕ ಸಾಗಿ ಕಲಾಮಂದಿರದ ತಲುಪಲಿದೆ. ಪದ್ಮಪಾಣಿ ಲಲಿತ ಕಲಾ ಅಕಾಡೆಮಿ ವತಿಯಿಂದ ಬುದ್ಧ ಗೀತೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬೆಳಗ್ಗೆ 10.30ಕ್ಕೆ ಶಾಸಕ ಕೆ.ಹರೀಶ್ ಗೌಡ ಅಧ್ಯಕ್ಷತೆಯಲ್ಲಿ ಆಯೋಜಿಸಿರುವ ಸಭಾ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಉದ್ಘಾಟಿಸುವರು. ವಿಶ್ವಮೈತ್ರಿ ಬುದ್ಧ ವಿಹಾರದ ಡಾ.ಕಲ್ಯಾಣ ಸಿರಿ ಭಂತೇಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸಾಹಿತಿ ಡಾ.ರಹಮತ್ ತರೀಕೆರೆ ಮುಖ್ಯ ಭಾಷಣ ಮಾಡಲಿದ್ದಾರೆ ಎಂದರು.