ಜಿಲ್ಲೆ

'ಕೇಂದ್ರ ಬಜೆಟ್ ಒಂದು ಅವಲೋಕನ'

ಸುನಿಲ್ ಪೊನ್ನೇಟಿ

ಕುಶಾಲನಗರ:

2025-26ನೇ ಸಾಲಿನ ಕೇಂದ್ರ ಬಜೆಟ್ ಮಧ್ಯಮ ವರ್ಗದವರಿಗೆ ಅನುಕೂಲಕರವಾಗಿದ್ದು ಗ್ರಾಮೀಣ ಅಭಿವೃದ್ಧಿಗೆ ಪೂರಕವಾಗಿರುತ್ತದೆ ಎಂದು ಮಡಿಕೇರಿ ಎಫ್.ಎಂ.ಕೆ.ಎA. ಸಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಇ. ತಿಪ್ಪೇಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ಇಲ್ಲಿನ ಹಾರಂಗಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಮತ್ತು ಐಕ್ಯೂಎಸಿ ವತಿಯಿಂದ ಶನಿವಾರ ಆಯೋಜಿಸಲಾದ 'ಕೇಂದ್ರ ಬಜೆಟ್ ಒಂದು ಅವಲೋಕನ' ಒಂದು ದಿನದ ಕಾರ್ಯಾಗಾರದಲ್ಲಿ ಮಾತನಾಡಿದರು.

ಕೇಂದ್ರ ಬಜೆಟ್‌ನಲ್ಲಿ ಎಂಎಸ್‌ಎAಇ ಕಾರ್ಖಾನೆಗಳಿಗೆ ಆದ್ಯತೆ ನೀಡಿದಲ್ಲದೇ, ಸ್ವ ಉದ್ಯೋಗ, ಸ್ವಾವಲಂಬನೆಗೆ ಆದ್ಯತೆ ನೀಡಲಾಗಿದೆ. ಜನಪರ ಕಾಳಜಿಯ ನಿಲುವಿನ ಮೇಲೆ ಬಜೆಟ್ ಮಂಡನೆಯಾಗಿದೆ.

ಯುವ ಜನತೆಗೆ ರೈಲ್ವೆ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿ ಉದ್ಯೋಗವಕಾಶವನ್ನು ನೀಡುವುದರ ಮೂಲಕ ಬದುಕು ಕಟ್ಟಲು ಅವಕಾಶ ನೀಡಲಾಗಿದೆ. ಮಹಿಳೆಯರ ಭವಿಷ್ಯವನ್ನು ಮುಂದುಟ್ಟುಕೊAಡು ಬಜೆಟ್ ನಲ್ಲಿ ಹೆಚ್ಚಿನ ಅನುದಾನದ ತಯಾರಿ ಮಾಡಲಾಗಿದೆ ಎಂದರು.

ಕಾಲೇಜಿನ ಪ್ರಾಚಾರ್ಯ ಬಿ.ಎಂ. ಪ್ರವೀಣ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಐಕ್ಯೂಎಸಿ ಸಂಚಾಲಕ ಡಾ.ಪುಟ್ಟರಾಜು, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪಿ.ರಮೇಶ್ಚಂದ್ರ ಇದ್ದರು.