ಜಿಲ್ಲೆ

ಕುಶಾಲನಗರ ಪುರಸಭೆ 7.43 ಲಕ್ಷ ರೂ. ಉಳಿತಾಯದ ಬಜೆಟ್

ಸುನಿಲ್ ಪೊನ್ನೇಟಿ

ಕುಶಾಲನಗರ:

ಕುಶಾಲನಗರ ಪುರಸಭೆಯ 2025-26ನೇ ಸಾಲಿಗೆ 7.43 ಲಕ್ಷ ರೂ. ಉಳಿತಾಯದ ಬಜೆಟ್ ಅನ್ನು ಅಧ್ಯಕ್ಷೆ ಜಯಲಕ್ಷಿö್ಮÃ ಚಂದ್ರು ಬುಧವಾರ ಮಂಡಿಸಿದರು. ಪ್ರಸಕ್ತ ಸಾಲಿಗೆ ವಿವಿಧ ಮೂಲಗಳಿಂದ ಒಟ್ಟು 27.30 ಕೋಟಿ ರೂ. ಆದಾಯ ನಿರೀಕ್ಷಿಸಲಾಗಿದ್ದು, 27.22 ಕೋಟಿ ರೂ.ಗಳ ಖರ್ಚು ಅಂದಾಜಿಸಲಾಗಿದೆ.

ಬಜೆಟ್ ಮಂಡಿಸಿದ ನಂತರ ಮಾತನಾಡಿದ ಅಧ್ಯಕ್ಷೆ ಜಯಲಕ್ಷಿö್ಮÃ ಚಂದ್ರು, ಹಿಂದಿನ ಬಜೆಟ್‌ಗಳಲ್ಲಿ ಹಾಕಿಕೊಂಡ ಅಭಿವೃದ್ಧಿ ಕಾರ್ಯಗಳನ್ನು, ಯೋಜನೆಗಳನ್ನು ಶಾಸಕರುಗಳು, ಅಧಿಕಾರಿ, ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರ ಸಹಕಾರದಿಂದ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದೆ. ಕೆಲವು ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದೆ. ಪುರಸಭಾ ವ್ಯಾಪ್ತಿಯ ಜನರಿಗೆ ಅತ್ಯುತ್ತಮ ಮೂಲಭೂತ ಸೌಲಭ್ಯ ಒದಗಿಸುವುದು ಮತ್ತು ಪುರಸಭೆಯನ್ನು ಆರ್ಥಿಕವಾಗಿ ಸದೃಢಗೊಳಿಸುವುದು, ಅದಕ್ಕೆ ತಕ್ಕ ಆದಾಯ ಮೂಲಗಳಾದ ತೆರಿಗೆ ಸಂಗ್ರಹ ಹಾಗೂ ಅನುದಾನ ಪ್ರಮುಖವಾಗಿ ಆಸ್ತಿ ತೆರಿಗೆ, ವಾಣಿಜ್ಯ ಮಳಿಗೆ ಬಾಡಿಗೆ, ಉದ್ದಿಮೆ ಪರವಾನಗಿ, ಮಾರುಕಟ್ಟೆ ಬಾಡಿಗೆಗಳು ಹಾಗೂ ಇತರೆ ಶುಲ್ಕಗಳು ಮತ್ತು ಸರ್ಕಾರದಿಂದ ಬಿಡುಗಡೆ ಆಗುವ ನಗರೋತ್ಥಾನ ಅನುದಾನ, ಎಸ್.ಎಫ್.ಸಿ. ಅನುದಾನ, ಹಣಕಾಸು ಆಯೋಗದ ಅನುದಾನ, ಎಸ್.ಎಫ್.ಸಿ.ವಿಶೇಷ ಅನುದಾನ ಇವೆಲ್ಲವನ್ನೂ ಅಂದಾಜಿಸಿಕೊAಡು, ಚರಂಡಿ ನಿರ್ಮಾಣ, ಬೀದಿ ದೀಪ ಅಳವಡಿಕೆ, ನೀರು ವಿತರಣಾ ವ್ಯವಸ್ಥೆ, ಒಳಚರಂಡಿ ವ್ಯವಸ್ಥೆ, ವಾಣಿಜ್ಯ ಮಳಿಗೆಗಳ ನಿರ್ಮಾಣ, ಸ್ಥಿರಾಸ್ತಿ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ ಎಂದು ತಿಳಿಸಿದರು.

ಉಪಾಧ್ಯಕ್ಷೆ ಪುಟ್ಟಲಕ್ಷಿö್ಮÃ, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಬಿ. ಸುರೇಶ್, ಎಲ್ಲಾ ಸದಸ್ಯರು, ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಹಾಗೂ ಸಿಬ್ಬಂದಿ ಇದ್ದರು.