ಜಿಲ್ಲೆ

ಅರಸಿನಮಕ್ಕಿಯ ಫಲಸ್ತಡ್ಕದಲ್ಲಿ ಗುಂಡಿಗೆ ಸಾಕೆಮ್ಮೆ ಬಲಿ

Dakshina Kannada

ಬೆಳ್ತಂಗಡಿ: ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯ ಫಲಸ್ತಡ್ಕ ಎಂಬಲ್ಲಿ ಮೇಯಲು ಬಿಟ್ಟಿದ್ದ ಎಮ್ಮೆ ಕಿಡಿಗೇಡಿಗಳು ಹಾರಿಸಿದ ಗುಂಡಿಗೆ ಬಲಿಯಾಗಿದೆ.

ಹೊಸ್ತೋಟ ವಾಳ್ಯದ ಅರೆಕ್ಕಲ್ ಮಹಾದೇವ ಭಟ್ ಎಂಬುವರು, ಹಾಲು ಕರೆಯುವ 10 ವರ್ಷ ಪ್ರಾಯದ ಎಮ್ಮೆಯನ್ನು ಮನೆ ಪರಿಸರದಲ್ಲಿ ಮೇಯಲು ಬಿಟ್ಟಿದ್ದರು.

ಎಮ್ಮೆ ತಡರಾತ್ರಿವರೆಗೂ ಮನೆಗೆ ಬಾರದ ಕಾರಣ ಹುಡುಕಾಟ ನಡೆಸಿದಾಗ ಸಮೀಪದ ಫಲಸ್ತಡ್ಕ ಎಂಬಲ್ಲಿ ಮಂಗಳವಾರ ಮೃತದೇಹ ಪತ್ತೆಯಾಗಿದೆ. ಎಮ್ಮೆಯ ಮೈಮೇಲೆ ಗುಂಡಿನ ಗಾಯಗಳು ಕಂಡುಬಂದಿದ್ದು ಬೇಟೆಗಾರರ ಗುಂಡೇಟಿಗೆ ಬಲಿಯಾಗಿದೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳ ಜತೆ ಉಪ್ಪಿನಂಗಡಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪಶುವೈದ್ಯಕೀಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.