ಕಕಮರಿ ಗ್ರಾಮದ ಶ್ರೀ ಸದ್ಗುರು ರಾಯಲಿಂಗೇಶ್ವರ ಸ್ವತಂತ್ರ ಪದವಿಪೂರ್ವ ಕಾಲೇಜು ಹಾಗೂ ಮಾತೋಶ್ರೀ ನೀಲಮ್ಮ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಗಣ್ಯರು ಉದ್ಘಾಟಿಸಿದರು. ಮಹಾಲಿಂಗ ಮೇತ್ರಿ, ಸ್ವಪ್ನಾ ಅನಿಗೋಳ, ಗುರುಲಿಂಗ ಜಂಗಮ ಸ್ವಾಮೀಜಿ, ಗಿರೀಶ ಬಸರಗಿ ಇತರರಿದ್ದರು. 
ಜಿಲ್ಲೆ

ಆತ್ಮಸ್ಥೈರ್ಯ ಬೆಳೆಸಿಕೊಳ್ಳಲಿ

ರಾಘವೇಂದ್ರಗೌಡ ಭೀ ಪಾಟೀಲ್

ಕಕಮರಿ: ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಸಾಧನೆ ಮಾಡಬೇಕು ಎಂದು ಅಥಣಿ ಜೆಇ ಸಂ.ಪ.ಪೂ ಕಾಲೇಜು ಪ್ರಾಚಾರ್ಯ ಮಹಾಲಿಂಗ ಮೇತ್ರಿ ಹೇಳಿದರು.

ಗ್ರಾಮದ ಶ್ರೀ ಸದ್ಗುರು ರಾಯಲಿಂಗೇಶ್ವರ ಸ್ವತಂತ್ರ ಪದವಿಪೂರ್ವ ಕಾಲೇಜು ಹಾಗೂ ಮಾತೋಶ್ರೀ ನೀಲಮ್ಮ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ, ಸಾಂಸ್ಕೃತಿಕ, ಕ್ರೀಡೆ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕಗಳನ್ನು ಉದ್ಘಾಟಿಸಿ ಮಾತನಾಡಿ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು ಎಂದರು.

ಉಪನ್ಯಾಸಕಿ ಸ್ವಪ್ನಾ ಅನಿಗೋಳ ಮಾತನಾಡಿ, ವಿದ್ಯಾರ್ಥಿಗಳು ಮಾನವೀಯ ಮೌಲ್ಯ ಅಳವಡಿಸಿಕೊಳ್ಳಬೇಕು ಎಂದರು. ಅಭಿನವ ಗುರುಲಿಂಗ ಜಂಗಮ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಗಿರೀಶ ಬಸರಗಿ, ದೇವರ ನಿಂಬರಗಿ, ಮಹೇಶ ಗುಮಾಸ್ತೆ, ಗಿರೀಶ ಶಿರೋಳ, ರಾಜು ಶಿಂಗೆ ಇತರರಿದ್ದರು. ಪ್ರಾಚಾರ್ಯ ಶಿವಗುರು ಬಸರಗಿ ಸ್ವಾಗತಿಸಿದರು. ಪ್ರಾಚಾರ್ಯ ಸಂಗಮೆಶ ಬಸರಗಿ ನಿರೂಪಿಸಿದರು. ವಂದಿಸಿದರು.