ಕೋಡಿಯ ಸೀವಾಕ್‌ನಲ್ಲಿ ಸ್ವಚ್ಛತೆಯೇ ಸೇವೆ 2024 ಕಾರ್ಯಕ್ರಮ ನಡೆಯಿತು. 
ಜಿಲ್ಲೆ

ಹೃದಯ ಮನಸ್ಸಿನೊಂದಿಗೆ ಸ್ವಚ್ಛ ಪರಿಸರ ನಿರ್ಮಾಣ

ಕುಂದಾಪುರ: ಪರಿಸರ ಜೀವಿಯಾದ ಮಾನವನಿಂದ ನಿರ್ಮಲ ಪರಿಸರ ಹದಗೆಟ್ಟಿರುವುದು ನಿಜಕ್ಕೂ ನೋವಿನ ಸಂಗತಿ. ಈ ನೆಲೆಯಲ್ಲಿ ಯುವಶಕ್ತಿ ಸ್ವಚ್ಛ ಹೃದಯ ಮನಸ್ಸಿನೊಂದಿಗೆ ಸ್ವಚ್ಛ ಪರಿಸರ ನಿರ್ಮಿಸಿ ಉಳಿಸಿ ಬೆಳೆಸಬೇಕು ಎಂದು ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಬ್ದುಲ್ ರಹೀಮ್ ಹೇಳಿದರು.

ಕುಂದಾಪುರ ತಾಲೂಕಿನ ಕೋಡಿಯ ಸೀವಾಕ್‌ನಲ್ಲಿ ಗುರುವಾರ ಕೋಡಿ ಬ್ಯಾರೀಸ್ ಪ್ರಥಮದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಕುಂದಾಪುರ, ಅಭಿಯೋಗ ಇಲಾಖೆ, ತಾಲೂಕು ಆಡಳಿತ ಮತ್ತು ಪುರಸಭೆ ಕುಂದಾಪುರ ಆಶ್ರಯದಲ್ಲಿ ಸ್ವಚ್ಛತೆಯೇ ಸೇವೆ 2024 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕುಂದಾಪುರದ ಹಿರಿಯ ಸಿವಿಲ್ ನ್ಯಾಯಾಧೀಶ ರಾಜು ಎನ್., ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶೆ ಮಂಜುಳಾ ಬಿ., ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಆನಂದ್ ಜಿ., ಬ್ಯಾರೀಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ಶಬೀನಾ ಎಚ್., ಬ್ಯಾರೀಸ್ ಬಿ.ಎಡ್ ಕಾಲೇಜಿನ ಪ್ರಾಂಶುಪಾಲ ಸಿದ್ದಪ್ಪ ಕೆ.ಎಸ್., ಬ್ಯಾರೀಸ್ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸಂದೀಪ್ ಶೆಟ್ಟಿ ಹಾಗೂ ನೂತನ್ ಮೊದಲಾದವರು ಉಪಸ್ಥಿತರಿದ್ದರು.