ರಾಯಚೂರಿನ ಎಸ್‌ಕೆಎಎಸ್ ಕಾಲೇಜಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಕೌಶಲ್ಯ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣಾ ಸಮಾರಂಭದಲ್ಲಿ ಕರ್ನಾಟಕ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಅಪರ ನಿರ್ದೇಶಕ ಡಾ.ಸಬೀರ್ ಅಹ್ಮದ್ ಮುಲ್ಲಾ ಶುಕ್ರವಾರ ಪ್ರಮಾಣಪತ್ರ ವಿತರಿಸಿದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ, ಸಂಸ್ಥೆ ಕಾರ್ಯದರ್ಶಿ ಡಾ.ಬಾಬುರಾವ್ ಶೇಗುಣಸಿ ಇದ್ದರು. 
ಜಿಲ್ಲೆ

ಕೌಶಲ್ಯಭರಿತ ಶಿಕ್ಷಣದಿಂದ ಸದೃಢ ದೇಶ ನಿರ್ಮಾಣ

ರಾಚಯ್ಯ ಸ್ವಾಮಿ

ರಾಯಚೂರು: ಜಗತ್ತು ಇಂದು ಪ್ರಗತಿ ಪಥದಲ್ಲಿ ಸಾಗುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕೌಶಲ್ಯಭರಿತ ಶಿಕ್ಷಣ ಪಡೆದಾಗ ಮಾತ್ರ ಸದೃಢ ದೇಶ ನಿರ್ಮಾಣ ಮಾಡಲು ಸಾಧ್ಯ ಎಂದು ಕರ್ನಾಟಕ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಅಪರ ನಿರ್ದೇಶಕ ಡಾ.ಸಬೀರ್ ಅಹ್ಮದ್ ಮುಲ್ಲಾ ಹೇಳಿದರು.
ಸ್ಥಳೀಯ ಎಸ್‌ಕೆಎಎಸ್ ಕಾಲೇಜಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಶುಕ್ರವಾರ ಏರ್ಪಡಿಸಿದ್ದ ಜಿಡಿಎ ವಿದ್ಯಾರ್ಥಿಗಳಿಗೆ ತರಬೇತಿ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೌಶಲ್ಯ ಇಲ್ಲದಿದ್ದರೆ ಕಲಿತ ಶಿಕ್ಷಣದಿಂದ ಮುಂದೆ ಬರಲು ಸಾಧ್ಯವಾಗುವುದಿಲ್ಲ ಎಂದರು.
ಇಲಾಖೆ ವತಯಿಂದ ಪ್ಯಾರಾ ಮೆಡಿಕಲ್, ನರ್ಸಿಂಗ್, ಸ್ಪರ್ಧಾತ್ಮಕ ಪರೀಕ್ಷೆ, ವ್ಯಕ್ತಿತ್ವ ವಿಕಸನ, ಸ್ವಉದ್ಯೋಗಕ್ಕೆ ಸಂಬಂಸಿದಂತೆ ಕೌಶಲ್ಯಭರಿತ ತರಬೇತಿ ನೀಡುತ್ತಿದೆ. ಅದನ್ನು ವಿದ್ಯರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಮಾತನಾಡಿ, ರಾಜ್ಯದಲ್ಲಿ ಎಸ್‌ಕೆಇಎಸ್ ಪ್ಯಾರಾ ಮೆಡಿಕಲ್ ಕಾಲೇಜು ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಕಾಲೇಜಿನ ವಿದ್ಯಾರ್ಥಿಗಳು ಉದ್ಯೋಗದಲ್ಲಿರುವ ಉತ್ತಮ ಬೆಳವಣಿಗೆಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಂಸ್ಥೆ ಕಾರ್ಯದರ್ಶಿ ಡಾ.ಬಾಬುರಾವ್ ಶೇಗುಣಸಿ, ಪ್ರಾಚಾರ್ಯೆ ರಶ್ಮಿ ನಾಗೋಲಿ, ಉಪನ್ಯಾಸಕರಾದ ಅಶ್ವಿನಿ ಲೋಣಿ, ಜೀವನ ಜ್ಯೋತಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.