ಜಿಲ್ಲೆ

ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ

ಶಿವರಾಜ.ಎಂ

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ

ಸರ್ಕಾರಿ ಶಾಲೆಗಳಲ್ಲಿ ಎಲ್ಲ ಮೂಲಸೌಕರ್ಯಗಳ ಜತೆಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ ಪಾಲಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸುವ ಮೂಲಕ ಅವರ ಉತ್ತಮ ಭವಿಷ್ಯಕ್ಕೆ ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ದೇವನಹಳ್ಳಿ ತಾಲೂಕು ಜಾಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಂಡ್ಲು ಗ್ರಾಮದಲ್ಲಿ ಮೂರ್ತಿ ಟ್ರಸ್ಟ್ ವತಿಯಿಂದ ನಿರ್ಮಿಸಿರುವ ನಮ್ಮೂರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ನೂತನ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಒತ್ತು ನೀಡುತ್ತಿದೆ. ಇದರ ಜತೆಗೆ ದಾನಿಗಳು ಹಾಗೂ ಖಾಸಗಿ ಕಂಪನಿಯವರು ನೆರವಿನ ಹಸ್ತ ಚಾಚುತ್ತಿದ್ದು, ಶಾಲೆಗಳು ಹೈಟೆಕ್ ಆಗುತ್ತಿವೆ. ಮೂಲಸೌಕರ್ಯಗಳು ಹೆಚ್ಚು ಅಭಿವೃದ್ಧಿಯಾಗುತ್ತಿವೆ ಎಂದರು. ಮೂರ್ತಿ ಟ್ರಸ್ಟ್ ವತಿಯಿಂದ ನಿರ್ಮಿಸಿರುವ ನಮ್ಮೂರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ನೂತನ ಕಟ್ಟಡವು 4 ಕೊಠಡಿ ಒಳಗೊಂಡಿದ್ದು 1.50 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗಿದೆ ಎಂದು ಮಾಹಿತಿ ನೀಡಿದರು.

ವಿದ್ಯುತ್ ದೀಪಕ್ಕೆ ಚಾಲನೆ:

ಅರದೇಶನಹಳ್ಳಿ ಗ್ರಾಮದಲ್ಲಿ 2 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿರುವ ಹೈಮಾಸ್ಟ್ ವಿದ್ಯುತ್ ದೀಪಕ್ಕೆ ಸಚಿವರು ಚಾಲನೆ ನೀಡಿದರು.