ಹನುಮಸಾಗರದ ಶ್ರೀ ಅನ್ನದಾನೇಶ್ವರ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿನ ಶಾಲಾ ಕಟ್ಟಡ ಕಾಮಗಾರಿಯನ್ನು ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಮಂಗಳವಾರ ಪರೀಶಿಲಿಸಿದರು. 
ಜಿಲ್ಲೆ

ಕಟ್ಟಡ ನಿರ್ಮಾಣದಲ್ಲಿ ಗುಣಮಟ್ಟ ಕಾಯ್ದುಕೊಳ್ಳಿ- ಶಾಸಕ ಅಮರೇಗೌಡ ಬಯ್ಯಪುರ ಸೂಚನೆ

Koppal

ಹನುಮಸಾಗರ: ಪಟ್ಟಣದ ಶ್ರೀ ಅನ್ನದಾನೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಶಾಲಾ ಕಟ್ಟಡ ಕಾಮಗಾರಿ ಸ್ಥಳಕ್ಕೆ ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಮಂಗಳವಾರ ಭೆೇಟಿ ನೀಡಿ ಪರೀಶಿಲಿಸಿದರು.

ನಂತರ ಮಾತನಾಡಿ, 10 ಲಕ್ಷ ರೂ. ಅನುದಾನದಲ್ಲಿ ಶಾಲೆ ಕಟ್ಟಡ ನಿರ್ಮಾಣವಾಗುತ್ತಿದ್ದು, ಹೆಚ್ಚುವರಿಯಾಗಿ ಇನ್ನೂ 5 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗುವುದು. ಶಾಲಾ ಆಡಳಿತ ಮಂಡಳಿಯವರು ಗುತ್ತಿಗೆದಾರರಿಗೆ ಸಹಕಾರ ನೀಡಿ, ಗುಣಮಟ್ಟದ ಕಟ್ಟಡ ನಿರ್ಮಾಣವಾಗುವಂತೆ ನೋಡಿಕೊಳ್ಳಬೇಕು. ಮಕ್ಕಳ ಕಲಿಕೆಗೆ ಉತ್ತಮ ವಾತಾವರಣ ನಿರ್ಮಿಸುವುದು ಆಡಳಿತ ಮಂಡಳಿಯ ಕರ್ತವ್ಯವಾಗಿದ್ದು, ಶಾಲೆಗಳು ಮಕ್ಕಳನ್ನು ಆಕರ್ಷಿಸುವಂತಿರಬೇಕು ಎಂದರು.

ಮುಖಂಡರಾದ ಮಹಾಂತೇಶ ಅಗಸಿಮುಂದಿನ, ಸಂಗಯ್ಯ ವಸ್ತ್ರದ, ಸೂಚಪ್ಪ ದೇವರಮನಿ, ಮಹಾಂತಯ್ಯ ಕೋಮಾರಿ, ಭವಾನಿಸಾ ಪಾಟೀಲ್, ಮಲ್ಲಯ್ಯ ಕೋಮಾರಿ, ಶ್ರೀಶೈಲ ಮೋಟಗಿ, ಆಶೀಪ್ ಡಾಲಾಯತ್, ದುರಗೇಶ ಮಡಿವಾಳರ, ಮಂಜುನಾಥ ಹೂಲ್ಲೂರು ಇತರರಿದ್ದರು.