ಮಂಗಳೂರು : ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ಇದರ 27ನೇ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಸೆ.16ರಂದು ನಗರದ ಹೋಟೆಲ್ ಮೋತಿಮಹಲ್ ಸಭಾಂಗಣದಲ್ಲಿ ನಡೆಯಲಿದೆ. ಬೆಳಗ್ಗೆ 11ಕ್ಕೆ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್‌ನ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆ ನಡೆಯಲಿದೆ.
ಮಧ್ಯಾಹ್ನ 12ಕ್ಕೆ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಆರ್ಥಿಕ ತಜ್ಞ ಡಾ.ಕೆ.ಯು.ಮಾಡ ಇವರಿಗೆ ‘ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್ ’ ನೀಡಲಾಗುವುದು. ಹಿರಿಯ ಯಕ್ಷಗಾನ ಕಲಾವಿದ ಜೆಪ್ಪು ದಯಾನಂದ ಶೆಟ್ಟಿ ಅವರಿಗೆ ದಿ.ಡಾ.ಡಿ.ಕೆ.ಚೌಟ
ದತ್ತಿನಿಧಿ ಪ್ರಶಸ್ತಿ , ಕೃಷಿ ಕ್ಷೇತ್ರದ ಸಾಧನೆಗಾಗಿ ದೇವಕಿ ರೈ ಅವರಿಗೆ ದಿ.ಎಣ್ಮಕಜೆ ಕಲಾವತಿ ಶೆಟ್ಟಿ ದತ್ತಿ ನಿಧಿ ಪ್ರಶಸ್ತಿ ಸಹಿತ ವಿವಿಧ ದತ್ತಿನಿಧಿ ಪ್ರಶಸ್ತಿಗಳನ್ನು ವಿತರಿಸಲಾಗುವುದು. ಕುವೆಂಪು ವಿ.ವಿ.ಯಿಂದ ಡಾಕ್ಟರೇಟ್ ಪದವಿ ಪಡೆದ ಡಾ.ಎ.ಸದಾನಂದ ಶೆಟ್ಟಿ, ರಾಜ್ಯೋತ್ಸವ ಪ್ರಶಸ್ತಿ ಪಡೆದ ಅನಿವಾಸಿ ಉದ್ಯಮಿ ಡಾ.ಎಂ.ರವಿ ಶೆಟ್ಟಿ ಇವರುಗಳನ್ನು ಇದೇ ಸಂದರ್ಭ ಸನ್ಮಾನಿಸಲಾಗುವುದೆಂದು ವಿಶ್ವ ಬಂಟ ಪ್ರತಿಷ್ಠಾನದ ಕಾರ್ಯದರ್ಶಿ ಸಿಎ ಸುಧೀರ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.